ಹಾಲ್ದೊಡ್ಡೇರಿ ಸುಧೀಂದ್ರ
From Wikipedia
ಇವರು ಇಂಜಿನಿಯರಿಂಗ್ ಪದವಿಧರರಾಗಿದ್ದು ಡಿ.ಆರ್.ಡಿ.ಓದ ಸಿಮ್ಯಾಕ್ ಸಂಸ್ಥೆಯಲ್ಲಿ ವಿಜ್ಞಾನಿಯಾಗಿ ಕೆಲಸ ಮಾಡುತ್ತಿದ್ದಾರೆ. ತಂತ್ರಜ್ಞಾನ ಕುರಿತು ಹಲವಾರು ಪ್ರಬಂಧಗಳನ್ನು ಮತ್ತು ಉಪನ್ಯಾಸಗಳನ್ನು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಸಮ್ಮೇಳನಗಳಲ್ಲಿ ಮಂಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ವಿಜ್ಞಾನ-ತಂತ್ರಜ್ಞಾನ ಕುರಿತು ಪ್ರಜಾವಾಣಿ, ಸುಧಾ, ವಿಜಯ ಕರ್ನಾಟಕ ಮೊದಲಾದ ಕನ್ನಡ ಪತ್ರಿಕೆಗಳಲ್ಲಿ ಹಲವಾರು ಲೇಖನಗಳನ್ನು ಬರೆದಿದ್ದಾರೆ. ಒಂದು ಪ್ರಜಾವಾಣಿಯ ವಿಶೇಷಾಂಕದೊಡನೆ, ಇವರು ಕಂಪ್ಯೂಟರ ಮತ್ತು ಪರಿಕರಗಳ ಕುರಿತು ಬರೆದಿರುವ ಕಿರುಪುಸ್ತಕವನ್ನು ಕೊಡುಗೆಯಾಗಿ ನೀಡಲಾಗಿದೆ.
ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿನ ಪ್ರಸಿದ್ಧ ಅಂಕಣಕಾರರಲ್ಲಿ ಒಬ್ಬರಾಗಿದ್ದಾರೆ. ಈ ಪತ್ರಿಕೆಯಲ್ಲಿ ಇವರ ಲೇಖನವು ಪ್ರತಿ ಸೋಮವಾರದಂದು ಪ್ರಕಟವಾಗುತ್ತಿದೆ.
ಬೆಂಗಳೂರಿನಲ್ಲಿ ನೆಡೆದ ಪ್ರಥಮ ಕನ್ನಡ ವಿಜ್ಞಾನ ಸಮ್ಮೇಳನ, ಪ್ರಥಮ ಕನ್ನಡ ಗಣಕ ಸಮ್ಮೇಳನ ಮತ್ತು ಶಿವಮೊಗ್ಗದಲ್ಲಿ ನೆಡೆದ ಕನ್ನಡ ಮಾಹಿತಿ ತಂತ್ರಜ್ಞಾನ ಸಮ್ಮೇಳನಗಳಲ್ಲಿ ಇವರು ಮಾಹಿತಿ ತಂತ್ರಜ್ಞಾನ ಕುರಿತು ಕನ್ನಡದಲ್ಲಿ ಉಪನ್ಯಾಸ ನೀಡಿದ್ದಾರೆ.