ಬೀದರ್
From Wikipedia
ಬೀದರ್ - ಕರ್ನಾಟಕ ರಾಜ್ಯದ ಒ೦ದು ಜಿಲ್ಲೆ; ಇದೇ ಹೆಸರಿನ ನಗರ ಜಿಲ್ಲೆಯ ಜಿಲ್ಲಾ ಕೇಂದ್ರ. ಭಾಲ್ಕಿ, ಹುಮನಾಬಾದ್, ಹಲಸೂರು, ಔರಾದ ತಾಲೂಕುಗಳು ಈ ಜಿಲ್ಲೆಯಲ್ಲಿವೆ. ಬೀದರ್ ಜಿಲ್ಲೆಯು ಸಾಂಸ್ಕೃತಿಕವಾಗಿ ಕರ್ನಾಟಕದ ಅತ್ಯಂತ ಪ್ರಮುಖ ಜಿಲ್ಲೆಗಳಲ್ಲೊಂದು. ಇದು ರಾಜ್ಯದಲ್ಲಿರುವ ಅತ್ಯಂತ ಹಿಂದುಳಿದಿರುವ ಜಿಲ್ಲೆಗಳಲ್ಲಿ ಒಂದಾಗಿದೆ. ಬೀದರ್ ಜಿಲ್ಲೆಯು ಬಿಜಾಪುರದ ಬಹಮನಿ ಸುಲ್ತಾನರ ಆಳ್ವಿಕೆಯಲ್ಲಿತ್ತು. ಬಹಮನಿ ಸುಲ್ತಾನರ ಆಳ್ವಿಕೆಯಲ್ಲಿ ಬೀದರ್, ಬಿಜಾಪುರ, ಗೋಲ್ಕೊಂಡ, ಗುಲಬರ್ಗ ಮತ್ತು ಬಿರಾರ್ ಸಂಸ್ಥಾನಗಳೂ ಸೇರಿದ್ದವು ಎಂಬುದನ್ನು ಗಮನಿಸಬಹುದು. ಬೀದರ್ ಜಿಲ್ಲೆಯು ಬಸವಕಲ್ಯಾಣದಿಂದ ಉಗಮಿಸಿದ ಶರಣರ ಸಾಂಸ್ಕೃತಿಕ ಕ್ರಾಂತಿಯನ್ನೂ ಕಂಡಿದೆ. ಬಸವಕಲ್ಯಾಣದಲ್ಲಿ ಜನಿಸಿದ ಶೈವ ಸಂಸ್ಕೃತಿಯು ವಿಶ್ವಾದಂತ್ಯ ಪಸರಿಸಿ, ನಮ್ಮ ರಾಜ್ಯಕ್ಕೆ ಈಗಿರುವ ವಿಶೇಷ ಮಹತ್ವವನ್ನು ತಂದಿದೆ. ಬೀದರ್ ನಗರದಲ್ಲಿರುವ ವಾಯುಪಡೆ ತರಬೇತಿ ಕೇಂದ್ರ ಪ್ರಸಿದ್ಧವಾಗಿದೆ.
ಪರಿವಿಡಿ |
[ಬದಲಾಯಿಸಿ] ಆಕರ್ಷಣೆಗಳು
ಬೀದರ್ ನಗರದ ಪ್ರಸಿದ್ಧ ಸ್ಥಳಗಳಲ್ಲಿ ಪಾಪನಾಶ ದೇವಾಲಯ, ಮೈಲಾರ, ನರಸಿಂಹ ಜೀರಾ ಮತ್ತು ನಾನಕ್ ಜೀರಾ ಪ್ರಖ್ಯಾತವಾಗಿವೆ. ನರಸಿಂಹ ಜೀರಾ ಕ್ಷೇತ್ರದಲ್ಲಿ ನಡುಮಟ್ಟದ ನೀರಿನಲ್ಲಿ 300 ಮೀಟರ್ ಇರುವ ಗವಿಯಲ್ಲಿ ನೆಡೆದು ಬಂದರೆ, ನರಸಿಂಹ ಸ್ಡಾಮಿಯ ಉದ್ಭವ ಮೂರ್ತಿಯ ದರ್ಶನ ಪಡೆಯಬಹುದು. ಜಾಗೃತ ಕ್ಷೇತ್ರವೆಂದು ಪ್ರಸಿದ್ಧವಾದ ಇಲ್ಲಿಗೆ ದೂರದ ರಾಜ್ಯಗಳಿಂದಲೂ ಭಕ್ತರು ಬರುತ್ತಾರೆ. ನಾನಕ್ ಜೀರಾವು ಕರ್ನಾಟಕದ ಅತ್ಯಂತ ದೊಡ್ಡ ಸಿಖ್ ದೇವಾಲಯ ಮತ್ತು ಸಿಖ್ಖರ ಧರ್ಮಗುರುಗಳಾದ ಶ್ರೀ ಗುರುನಾನಕರು ತಮ್ಮ ಆಗಮನದಿಂದ ಪವಿತ್ರಗೊಳಿಸಿದ ಪುಣ್ಯಸ್ಥಳ.
ವರ್ಷ 1432ರಲ್ಲಿ ನಿರ್ಮಾಣ ಪೂರ್ಣಗೊಂಡ ಬೀದರದ ಐತಿಹಾಸಿಕ ಕೋಟೆ ಪ್ರಮುಖ ಪ್ರೇಕ್ಷಣೀಯ ಸ್ಥಳವಾಗಿದೆ. ಕೋಟೆಯಲ್ಲಿ ರಂಗೀನ ಮಹಲ್, ಗಗನ್ ಮಹಲ್, ಏಕ ಕಂಭದ ಮಸೀದಿ, ದಿವಾನ್-ಇ-ಆಮ್, ಬೃಹತ್ ಫಿರಂಗಿಗಳು, ವಸ್ತು ಸಂಗ್ರಹಾಲಯ ಮೊದಲಾದವುಗಳನ್ನು ನೋಡಬಹುದು. ವರ್ಷ 1472ರಲ್ಲಿ ನಿರ್ಮಾಣವಾದ ವಿಶ್ವಪ್ರಸಿದ್ಧವಾಗಿದ್ದ ಪ್ರಸಿದ್ಧ ಮೊಹಮ್ಮದ್ ಗವಾನ್ ಗ್ರಂಥಾಲಯ ಮತ್ತು ಅಧ್ಯಯನ ಕೇಂದ್ರದ ಅವಶೇಷವಾಗಿ ಉಳಿದಿರುವ ಗೋಪುರವು ದೆಹಲಿಯಲ್ಲಿರುವ ಕುತಬ್ ಮಿನಾರ್ ನಂತಿದೆ. ಚೌಬಾರಾ, ಹಬ್ಸಿ ಕೋಟ ದಾರಾ, ಕಾರಂಜಾ ಜಲಾಶಯ,ಜಲಸಂಗಿ ದೇವಸ್ಥಾನ, ವಿವಿಧ ಗಿಡಮೂಲಿಕೆಗಳ ದೇವಾಲಯದಂತ್ತಿರುವ ದೇವ-ದೇವ ವನ ಇವು ಇತರೆ ಪ್ರಮುಖ ಪ್ರೇಕ್ಷಣಿಯ ಸ್ಥಳಗಳಾಗಿವೆ.
ಬೀದರ್ ಜಿಲ್ಲೆಯ ಇನ್ನೊ೦ದು ಪ್ರಮುಖ ಪಟ್ಟಣ ಹುಮ್ನಾಬಾದ್ ಇಲ್ಲಿರುವ ಮಾಣಿಕ್ ಪ್ರಭು ಸಂಸ್ಥಾನ ಮತ್ತು ವರ್ಷ 1725ರಲ್ಲಿ ನಿರ್ಮಿಸಲಾಗಿರುವ ವೀರಭದ್ರೇಶ್ವರ ದೇವಸ್ಥಾನ ಮತ್ತು ಜಾತ್ರೆಗಳು ಪ್ರಮುಖವಾದುವು. ಬೀದರ್ ಜಿಲ್ಲೆಯ ಬಸವ ಕಲ್ಯಾಣ ಶರಣರ ತಪೋಭೂಮಿಯಂದೇ ಪ್ರಸಿದ್ಧವಾಗಿದೆ. ಅನುಭವ ಮಂಟಪ, ಅಕ್ಕನಾಗಮ್ಮನ ಗವಿ, ಪರುಷಕಟ್ಟೆ, ಮಹಾಮನೆ, ತ್ರಿಪುರಾಂತಕ ಕೆರೆ, ಮೊದಲಾಗಿ ಹಲವಾರು ಶರಣರ ಸ್ಥಳಗಳನ್ನು ಮತ್ತು ಸುಸ್ಥಿತಿಯಲ್ಲಿರುವ ಬಸವ ಕಲ್ಯಾಣ ಕೋಟೆಯನ್ನು ಬಸವಕಲ್ಯಾಣದಲ್ಲಿ ನೋಡಬಹುದಾಗಿದೆ. ಭಾಲ್ಕಿ ಪಟ್ಟಣವು ಹಿರೇಮಠ ಸಂಸ್ಥಾನದ ಮಠ ಮತ್ತು ದಲಿತೋದ್ದಾರ ಹಾಗೂ ಕನ್ನಡಕ್ಕಾಗಿ ಅಪಾರ ಸೇವೆ ಸಲ್ಲಿಸಿದ ಶತಾಯುಷಿ ಡಾ.ಚೆನ್ನಬಸವ ಪಟ್ಟದ್ದೇವರಿಂದಾಗಿ ಪ್ರಖ್ಯಾತವಾಗಿದೆ. ಅಷ್ಟೂರನಲ್ಲಿ ವಜ್ರಗಳಿಂದ ಅಲಂಕರಿಸಲ್ಪಟ್ಟ ಚಿತ್ರಗಳು ಇರುವ ಗೋರಿಗಳನ್ನು ನೋಡಬಹುದಾಗಿದೆ.
[ಬದಲಾಯಿಸಿ] ಚರಿತ್ರೆ
ಚಾರಿತ್ರಿಕವಾಗಿ, ಬೀದರ್ ಜಿಲ್ಲೆ ಪ್ರಾಮುಖ್ಯತೆಗೆ ಬ೦ದದ್ದು ಬಹಮನಿ ಸುಲ್ತಾನರ ಕಾಲದಲ್ಲಿ ಮತ್ತು ಬಸವಣ್ಣ ನವರ ಕಾಲದಲ್ಲಿ.
[ಬದಲಾಯಿಸಿ] ಭೌಗೋಳಿಕ
ಭೌಗೋಳಿಕವಾಗಿ ಬೀದರ್ ಜಿಲ್ಲೆಯು ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿದೆ.
[ಬದಲಾಯಿಸಿ] ಕರಕುಶಲ ಕಲೆ
ಬಿದರಿಕಲೆ ಪ್ರಪಂಚದಾದ್ಯಂತ ಖ್ಯಾತವಾಗಿರುವ ಬೀದರ್ ಕುಸರಿ ಕಲೆ. ಈ ಕಲೆಯು ಪರ್ಶಿಯಾ ದೇಶದಿಂದ ಬಹಮನಿ ಸುಲ್ತಾನರ ಕಾಲದಲ್ಲಿ ಇಲ್ಲಿಗೆ ಬಂದು ತದನಂತರ ಹೊಸ ರೂಪವನ್ನು ಪಡೆದುಕೊಂಡಿದೆ.
ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ್ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ರಾಯಚೂರು | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ