ಮಕರ ಸಂಕ್ರಾಂತಿ
From Wikipedia
ಸಂಕ್ರಾಂತಿ ಎಂಬ ಕನ್ನಡ ಚಲನಚಿತ್ರದ ಬಗ್ಗೆ ಮಾಹಿತಿಗೆ ಸಂಕ್ರಾಂತಿ (ಚಲನಚಿತ್ರ) ನೋಡಿ.
ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲಾಗುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು.
ಪರಿವಿಡಿ |
[ಬದಲಾಯಿಸಿ] ಆಚರಣೆ
[ಬದಲಾಯಿಸಿ] ಕರ್ನಾಟಕ
ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು "ಎಳ್ಳು". ಮನೆಯಲ್ಲಿ ಎಳ್ಳನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ "ಎಳ್ಳು ಬೀರುವುದು" ಮತ್ತು ಸ್ನೇಹಿತರು-ಸಂಬಂಧಿಕರೊಂದಿಗೆ ಶುಭಾಶಯಗಳನ್ನು ಹಂಚಿಕೊಳ್ಳುವುದು ಸಾಮಾನ್ಯವಾಗಿ ಕಂಡುಬರುವ ಸಂಕ್ರಾಂತಿಯ ಸಂಪ್ರದಾಯಗಳು. ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು, ಕಬ್ಬಿನ ಜಲ್ಲೆಗಳನ್ನು ಸಹ ಬೀರುವುದುಂಟು.
[ಬದಲಾಯಿಸಿ] ತಮಿಳುನಾಡು
ತಮಿಳುನಾಡಿನಲ್ಲಿ ಈ ಹಬ್ಬವನ್ನು "ಪೊಂಗಲ್" ಎಂದು ಕರೆಯಲಾಗುತ್ತದೆ. ಇಲ್ಲಿ ಇದು ನಾಲ್ಕು ದಿನಗಳ ಹಬ್ಬ - ಈ ನಾಲ್ಕು ದಿನಗಳು ಮತ್ತು ಆ ದಿನಗಳಲ್ಲಿನ ಆಚರಣೆಗಳು ಹೀಗಿವೆ:
- ಭೋಗಿ: ಹೊಸ ಬಟ್ಟೆಗಳು
- ಪೊಂಗಲ್: ಸಮೃದ್ಧಿಯ ಸಂಕೇತವಾಗಿ ಹಾಲು-ಬೆಲ್ಲಗಳನ್ನು ಪಾತ್ರೆಯಲ್ಲಿ ಕುದಿಸಿ ಉಕ್ಕಿಸಲಾಗುತ್ತದೆ
- ಮಟ್ಟು ಪೊಂಗಲ್: ಗೋಪೂಜೆ
- ಕೆಲವು ಕಡೆಗಳಲ್ಲಿ "ಜಲ್ಲಿಕಟ್ಟು" ಎಂಬ ಗೂಳಿಯನ್ನು ಪಳಗಿಸುವ ಆಟ ನಡೆಯುತ್ತದೆ
- ಕಾಣುಮ್ ಪೊಂಗಲ್
[ಬದಲಾಯಿಸಿ] ಇತರ ಸ್ಥಳಗಳು
ಮುಖ್ಯವಾಗಿ ದಕ್ಷಿಣ ಭಾರತದ ಹಬ್ಬವಾದರೂ, ಇತರ ಸ್ಥಳಗಳಲ್ಲಿ ಸಹ ಬೇರೆ ಬೇರೆ ಹೆಸರುಗಳಲ್ಲಿ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ಸಂಕ್ರಾಂತಿಯ ದಿನದಂದು ಗಾಳಿಪಟಗಳನ್ನು ಹಾರಿಬಿಡುವ ಸಂಪ್ರದಾಯವುಂಟು. ಪಂಜಾಬ್ ಮತ್ತು ಹರಿಯಾಣಗಳಲ್ಲಿ ಸಂಕ್ರಾಂತಿಗೆ "ಲೋಹರಿ" ಎಂದು ಹೆಸರು.