Ebooks, Audobooks and Classical Music from Liber Liber
a b c d e f g h i j k l m n o p q r s t u v w x y z





Web - Amazon

We provide Linux to the World


We support WINRAR [What is this] - [Download .exe file(s) for Windows]

CLASSICISTRANIERI HOME PAGE - YOUTUBE CHANNEL
SITEMAP
Audiobooks by Valerio Di Stefano: Single Download - Complete Download [TAR] [WIM] [ZIP] [RAR] - Alphabetical Download  [TAR] [WIM] [ZIP] [RAR] - Download Instructions

Make a donation: IBAN: IT36M0708677020000000008016 - BIC/SWIFT:  ICRAITRRU60 - VALERIO DI STEFANO or
Privacy Policy Cookie Policy Terms and Conditions
ವಿಕಿಪೀಡಿಯ:ವಿಶೇಷ ಬರಹಗಳು - Wikipedia

ವಿಕಿಪೀಡಿಯ:ವಿಶೇಷ ಬರಹಗಳು

From Wikipedia

ಈ ಪುಟದಲ್ಲಿ ವಿಶೇಷ ಬರಹಗಳ ಹಳೆಯ ಸಂಚಿಕೆಗಳನ್ನು ಪಟ್ಟಿ ಮಾಡಲಾಗಿದೆ.

ಸಂಚಿಕೆ ೧
ಕೂಡ್ಲಿ
ಕೂಡ್ಲಿ ಶಿವಮೊಗ್ಗ ಜಿಲ್ಲೆಯ, ಒಂದು ಪುಟ್ಟ ಊರು. ಈ ಊರು ಭಾರತ ದೇಶದ ಕರ್ನಾಟಕ ರಾಜ್ಯಕ್ಕೆ ಸೇರುತ್ತದೆ.

ತುಂಗಾ ಮತ್ತು ಭದ್ರಾ - ಇವೆರಡು ಜೀವನದಿಗಳು ಸಂಗಮವಾಗುವಲ್ಲಿರುವ ಈ ಊರು ತುಂಗಭದ್ರಾ ನದಿಗೆ ಜನ್ಮ ನಿಡುವ ಸ್ಥಳ.

  • ಪ್ರಾಮುಖ್ಯತೆ

ಆದಿ ಕಾಲದ ಸಂಗಮೇಶ್ವರ ದೇವಾಲಯ, ಸಂಗಮ ಹಾಗೂ ಪರಿಸರದ ವಿಹಂಗಮ ನೋಟ ಈ ಪ್ರದೇಶವನ್ನು ಸುಂದರಗೊಳಿಸಿದೆ. ಮಗದೊಂದು ಪ್ರವಾಸಿ ತಾಣವೆಂದೂ ಹೇಳಿದರೆ ತಪ್ಪಾಗದು. ಇಲ್ಲಿಯ 'ರಂಗನಾಥ ಸ್ವಾಮಿ' ದೇವಾಲಯವೂ ಜನಪ್ರಿಯ. ಸಂಗಮ ಸ್ಥಳದಲ್ಲಿ ನಂದಿಯ ಗುಡಿ ಇರುವುದುಂಟು. ಈ ಪುಟ್ಟ ಗುಡಿ ಸಂಗಮ ಸ್ಥಳವನ್ನು ಪ್ರತಿಪಾದಿಸುತ್ತದೆ. ಸಂಗಮೇಶ್ವರ ದೇವಾಲಯಕ್ಕೆ ಮಹತ್ತರ ಇತಿಹಾಸವಿರುವುದು. ಈ ದೇವಾಲಯ ಹೊಯ್ಸಳರ ಕಾಲದ್ದೆಂದು ಹೇಳಲಾಗುತ್ತದೆ. ಪ್ರಾಚೀನ ಶಿಲ್ಪಕಲೆಗಳಿಂದ ರಾರಾಜಿಸುವ ಈ ದೇವಾಲಯ ಕೂಡ್ಲಿಯ ಪ್ರಮುಖ ಆಕಷಣೆಗಳಲ್ಲೊಂದು.

  • ಇತಿಹಾಸ

ಇಲ್ಲಿಯ ಪ್ರಾಚೀನ ಸಂಗಮೇಶ್ವರ ದೇವಾಲಯ ಹೊಯ್ಸಳರ ಕಾಲದ್ದೆಂದು ಹೇಳಲಾಗುತ್ತದೆ. ಇಲ್ಲಿ ಕೆಲವು ಪ್ರಾಚೀನ ಶಾಸನಗಳಿರುವುದುಂಟು. ದೇವಾಲಯದ ಸುಂದರ ಶಿಲ್ಪಕಲೆ ಜನರ ಮನ ಸೂರೆಗೊಳಿಸುತ್ತದೆ. ಇದಲ್ಲದೆ ಇನ್ನೂ ಕೆಲವು ಚಿಕ್ಕ ಪುಟ್ಟ ಪ್ರಾಚೀನ ದೇವಾಲಯಗಳು ಇಲ್ಲಿ ಇರುವುದುಂಟು.

  • ಭೂಗೋಳ

ಶಿವಮೊಗ್ಗದಿಂದ ಕೆಲವೇ ಕಿ.ಮೀ. ದೂರದಲ್ಲಿರುವ ಈ ಊರಿಗೆ ಸುಲಭ ಬಸ್ಸು ಸೌಕರ್ಯವಿರುವುದುಂಟು. ಪ್ರಕೃತಿಯ ಮಡಿಲಾದ ಮಲೆನಾಡಿನ ಗಡಿಯಿದು - ಕೂಡ್ಲಿ.

ಸಂಚಿಕೆ ೨
ಲೋಟಸ್ ಅರಮನೆ

ಉತ್ತರ ಕರ್ನಾಟಕದಲ್ಲಿರುವ ವಿಜಯನಗರ ಎಂಬುದು ಈಗ ನಿರ್ನಾಮವಾಗಿರುವ ಚಾರಿತ್ರಿಕ ವಿಜಯನಗರ ಸಾಮ್ರಾಜ್ಯದ ರಾಜಧಾನಿ.

ಈ ನಗರದ ಬಹುಭಾಗ ತುಂಗಭದ್ರಾ ನದಿಯ ದಕ್ಷಿಣ ದಂಡೆಯ ಮೇಲಿದೆ. ಈ ನಗರ ಹಂಪೆಯ ವಿರೂಪಾಕ್ಷ ದೇವಸ್ಥಾನದ ಪವಿತ್ರ ಮಧುಅಭಾಗದ ಸುತ್ತ ಕಟ್ಟಲಾದ ನಗರ. ಅದರ ವ್ಯಾಪ್ತಿಯಲ್ಲಿ ಇತರ ಪವಿತ್ರ ಸ್ಥಳಗಳು ಸಹ ಇವೆ - ಇವು ಸುಗ್ರೀವನ ಹುಟ್ಟೂರಾದ ಕಿಷ್ಕಿಂಧೆ ಇದ್ದ ಸ್ಥಳವೆಂದು ಹೇಳಲಾದ ಕ್ಷೇತ್ರವನ್ನು ಒಳಗೊಂಡಿವೆ.

ಈಗ ರಾಜಕೇಂದ್ರ ಮತ್ತು ಪವಿತ್ರಕೇಂದ್ರ ಎಂದು ಕರೆಯಲ್ಪಡುವ ಸ್ಥಳಗಳನ್ನು ಒಳಗೊಂಡ ನಗರದ ಮಧ್ಯಭಾಗ ೪೦ ಚ.ಕಿಮೀ ಗಿಂತ ಹೆಚ್ಚು ವಿಸ್ತೀರ್ಣದಲ್ಲಿ ಹಬ್ಬಿದೆ. ಇದು ಈಗಿನ ಹಂಪೆ ಗ್ರಾಮವನ್ನು ಸಹ ಕೂಡಿದೆ. ಕಮಲಾಪುರಮ್ ಎಂಬ ಗ್ರಾಮ ಹಳೆಯ ನಗರದ ಸ್ವಲ್ಪ ದೂರದಲ್ಲೇ ಇದ್ದು ಅನೇಕ ಸ್ಮಾರಕಗಳನ್ನು ಹೊಂದಿದೆ. ಇಲ್ಲಿಗೆ ಅತಿ ಹತ್ತಿರದ ನಗರ ಮತ್ತು ರೈಲ್ವೇ ನಿಲ್ದಾಣ ಎಂದರೆ ಹೊಸಪೇಟೆ, ೧೩ ಕಿಮೀ ದೂರದಲ್ಲಿದೆ.

ಪ್ರಾಕೃತಿಕವಾಗಿ, ಈ ನಗರ ಎಲ್ಲ ಗಾತ್ರದ ಜಲ್ಲಿಯ ಬಂಡೆಗಳಿಂದ ಕೂಡಿದ ಗುಡ್ಡಗಾಡು ಪ್ರದೇಶದಲ್ಲಿ ಇದೆ. ಇಲ್ಲಿರುವ ಒಂದು ಕೊರಕಲಿನ ಮೂಲಕ ತುಂಗಭದ್ರಾ ನದಿ ಹರಿಯುತ್ತದೆ ಮತ್ತು ಉತ್ತರ ದಿಕ್ಕಿನಲ್ಲಿ ರಕ್ಷಣೆಯನ್ನು ಒದಗಿಸುತ್ತಿತ್ತು. ದೊಡ್ಡ ಜಲ್ಲಿಕಲ್ಲಿನ ಕೋಟೆಗಳು ನಗರದ ಮಧ್ಯಭಾಗವನ್ನು ರಕ್ಷಿಸುತ್ತಿದ್ದವು.

ನಾಶವಾದ ಈ ನಗರ ಯುನೆಸ್ಕೋ ಪ್ರಪಂಚ ಸಂಸ್ಕೃತಿ ಕ್ಷೇತ್ರವಾಗಿ ಮಾನ್ಯತೆ ಪಡೆದಿದೆ.

  • ಚರಿತ್ರೆ

ಹಿಂದೂ ವಿಜಯನಗರ ಸಾಮ್ರಾಜ್ಯ ೧೩೩೬ ರಲ್ಲಿ ಹಕ್ಕ (ನಂತರ ಹರಿಹರ) ಮತ್ತು ಬುಕ್ಕ (ನಂತರ ಬುಕ್ಕ ರಾಯ) ಎಂಬ ಅಣ್ಣತಮ್ಮಂದಿರಿಂದ ಸ್ಥಾಪಿಸಲ್ಪಟ್ಟಿತು. ಅವರ ಮೂಲ ಸ್ಥಾನ ಇದೇ ಕ್ಷೇತ್ರದಲ್ಲೇ ಇತ್ತೆಂದು ತಿಳಿದುಬಂದಿದೆ. ರಾಜಧಾನಿ ಮೊದಲು ಪ್ರಾಯಶಃ ತುಂಗಭದ್ರಾ ನದಿಯ ಉತ್ತರದಲ್ಲಿ ವಿಠ್ಠಲ ದೇವಸ್ಥಾನದ ಬಳಿ ಇರುವ ಆನೆಗೊಂಡಿ ಎಂಬ ಗ್ರಾಮದಲ್ಲಿತ್ತು. ಸಾಮ್ರಾಜ್ಯ ಬೆಳೆಯುತ್ತಾ ಸಮೃದ್ಧವಾದಂತೆ ರಾಜಧಾನಿಯನ್ನು ತುಂಗಭದ್ರೆಯ ದಕ್ಷಿಣದಲ್ಲಿರುವ ಹೆಚ್ಚು ಸುರಕ್ಷಿತ ವಿಜಯನಗರಕ್ಕೆ ವರ್ಗಾಯಿಸಲಾಯಿತು.

ನಗರ ೧೪ನೇ ಶತಮಾನದಿಂದ ೧೬ ನೇ ಶತಮಾನದ ವರೆಗೆ ಉಚ್ಛ್ರಾಯ ಸ್ಥಿತಿಯಲ್ಲಿತ್ತು, ವಿಜಯನಗರ ಸಾಮ್ರಾಜ್ಯದ ಶಕ್ತಿಯ ತುಟ್ಟತುದಿಯಲ್ಲಿ. ಇದೇ ಸಮಯದಲ್ಲಿ ಅದು ಕಾಲಕಾಲಕ್ಕೆ ಉತ್ತರ ದಖನ್ ಪ್ರದೇಶದಲ್ಲಿ ಇದ್ದು ಒಟ್ಟಾಗಿ ದಖನ್ ಸುಲ್ತಾನೇಟ್ ಎಂದು ಕರೆಯಲ್ಪಟ್ಟ ಮುಸ್ಲಿಮ್ ರಾಜ್ಯಗಳೊಂದಿಗೆ ಘಟ್ಟಿಸುತ್ತಿತ್ತು. ೧೫೬೫ ರಲ್ಲಿ ನಗರ ಅಂತಿಮವಾಗಿ ಈ ಸುಲ್ತಾನೇಟ್‌ಗಳ ಮೈತ್ರಿತ್ವಕ್ಕೆ ಸೋತಿತು ಮತ್ತು ರಾಜಧಾನಿಯನ್ನು ವಶಪಡಿಸಿಕೊಳ್ಳಲಾಯಿತು. ಜಯ ಪಡೆದ ಸೈನಿಕರು ಅನೇಕ ತಿಂಗಳುಗಳ ಕಾಲ ವಿಜಯನಗರದಲ್ಲಿ ಕೊಲೆ, ಲೂಟಿ ನಡೆಸಿದರು. ಇದರ ನಂತರವೂ ವಿಜಯನಗರ ಸಾಮ್ರಾಜ್ಯ ಉಳಿದರೂ ಸಹ ಅದು ನಿಧಾನವಾಗಿ ಕೆಳಮುಖವಾಯಿತು. ರಾಜಧಾನಿಯಾಗಿದ್ದ ವಿಜಯನಗರವನ್ನು ಪುನರ್ನಿರ್ಮಾಣ ಮಾಡಲಾಗಲಿಲ್ಲ. ಇಂದಿನ ವರೆಗೂ ಅಲ್ಲಿ ಜನವಸತಿಯಿಲ್ಲ.

ಅಂದಿನ ಮುಸ್ಲಿಮ್ ರಾಜ್ಯಗಳ ಸಂಪರ್ಕದ ಪರಿಣಾಮವಾಗಿ ವಿಜಯನಗರದ ಕಟ್ಟಡಗಳಲ್ಲಿ ಮುಸ್ಲಿಮ್ ಪ್ರಭಾವವನ್ನು ಸ್ವಲ್ಪ ಮಟ್ಟಿಗೆ ಕಾಣಬಹುದು.


ಸಂಚಿಕೆ ೩
ಲಾಲ್ ಬಹಾದುರ್ ಶಾಸ್ತ್ರಿ

ಲಾಲ್ ಬಹಾದುರ್ ಶಾಸ್ತ್ರಿ (ಅಕ್ಟೋಬರ್, ೧೯೦೪ - ಜನವರಿ ೧೧, ೧೯೬೬) ಸ್ವತಂತ್ರ ಭಾರತದ ಎರಡನೇ ಪ್ರಧಾನಿಯಾಗಿದ್ದರು. ಇವರು ಭಾರತದ ಸ್ವಾತಂತ್ರ್ಯಕ್ಕೆ ಹೋರಾಡಿದವರು.

  • ಜೀವನ

ಲಾಲ್ ಬಹಾದುರ್ ಮೊಘಲ್‌ಸಾರಾಯ್‌ನಲ್ಲಿ ಜನಿಸಿದ್ದು. ೧೯೨೧ರಲ್ಲಿ ಮಹಾತ್ಮ ಗಾಂಧಿಯವರ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಲು ಇವರು ತಮ್ಮ ಓದನ್ನು ಅರ್ಧದಲ್ಲೇ ಬಿಟ್ಟರು. ೧೯೨೬ರಲ್ಲಿ ಇವರಿಗೆ ಶಾಸ್ತ್ರಿ ಎಂಬ ಬಿರುದು ಕಾಶಿ ವಿದ್ಯಾ ಪೀಠದಿಂದ ಕೊಡಲ್ಪಟ್ಟಿತು. ಒಟ್ಟು ೯ ವರ್ಷಗಳ ಕಾಲ ಸ್ವಾತಂತ್ರ್ಯಕ್ಕಾಗಿ ಕಾರಾಗೃಹವಾಸ ಅನುಭವಿಸಿದ ಇವರು ಸತ್ಯಾಗ್ರಹ ಚಳುವಳಿ ಪ್ರಾರಂಭವಾದ ನಂತರ ೧೯೪೬ ರವರೆಗೂ ಜೈಲು ಶಿಕ್ಷೆ ಅನುಭವಿಸಿದರು.

  • ಭಾರತ ಸರಕಾರದಲ್ಲಿ ಸಲ್ಲಿಸಿದ ಸೇವೆ

ಸ್ವಾತಂತ್ರ ದೊರಕಿದ ಬಳಿಕ ಇವರು ಗೋವಿ೦ದ ವಲ್ಲಭ ಪ೦ತ್ ಅವರ ಸರಕಾರದಲ್ಲಿ ಪೋಲಿಸ್ ಖಾತೆಯನ್ನು ವಹಿಸಿಕೊಂಡಿದ್ದರು. ೧೯೫೧ರಲ್ಲಿ ಇವರು ಲೋಕ ಸಭೆಗೆ ಜನರಲ್ ಸೆಕ್ರೆಟರಿ ಆಗಿ ಆಯ್ಕೆಯಾದರು. ಇದರ ಪರ್ಯಾಯ ಇವರು ರೈಲ್ವೆ ಖಾತೆಯನ್ನು ವಹಿಸಿಕೊಂಡಿದ್ದೂ ಉಂಟು. ಅರಿಯಳೂರು ಬಳಿ ಆದ ರೈಲ್ವೆ ದುರಂತದ ತರುವಾಯ ಇವರು ತಮ್ಮ ರಾಜೀನಾಮೆ ನೀಡಿದರು. ಮತ್ತೊಮ್ಮೆ ಇವರು ಕ್ಯಾಬಿನೆಟ್‌ಗೆ ಮರಳಿದರು, ಮೊದಲು ಸಾರಿಗೆ ಮಂತ್ರಿಯಾಗಿ, ಬಳಿಕ ೧೯೬೧ರಲ್ಲಿ ಗೃಹ ಮಂತ್ರಿಯಾಗಿ.

  • ಪ್ರಧಾನಿಯಾಗಿ ಲಾಲ್ ಬಹಾದುರ್ ಶಾಸ್ತ್ರಿಗಳು

ಮೇ ೨೭, ೧೯೬೪ರಂದು ಜವಾಹರ್‌ಲಾಲ್ ನೆಹರು ತಮ್ಮ ಕಾರ್ಯಕಾಲದಲ್ಲಿ ಸಾವನ್ನಪ್ಪಿದರು. ಸ್ವಲ್ಪಮಟ್ಟಿಗೆ ಖಾಲಿ ಖಾಲಿಯಾದ ರಾಜಕೀಯ ರಂಗವನ್ನು ಬಿಟ್ಟು ಅಗಲಿದ್ದರು. ಕಾಂಗ್ರೆಸ್‌ನ ಕೆಲವು ಪ್ರಮುಖ ಹಸ್ತಿಗಳಿಗೆ ತಮಗೆ ಬೇಕಾದ ಬೆಂಬಲ ಸಿಗದ ಕಾರಣ ತುಂಬಾ ಸರಳ ಅಧಿಕಾರ ದಾಹಿಯೇ ಅಲ್ಲದ ಶಾಸ್ತ್ರಿಗಳಿಗೆ ಪ್ರಧಾನಿಯಾಗಲು ಅವಕಾಶ ಸಿಕ್ಕಿತು. ಇವರು ಅದೇ ವರ್ಷ ಜೂನ್ ೯ ರಂದು ಭಾರತದ ಪ್ರಧಾನಿಯಾದರು.

ಆಗಿನ ಪ್ರಮುಖ ಸಮಸ್ಯೆ ಪಾಕಿಸ್ತಾನವಾಗಿತ್ತು. ಕಚ್ ಬಳಿ ನಡೆದ ಯುದ್ಧ ಯುಎನ್ ಮಧ್ಯಸ್ಥಿಕೆಯಿಂದ ನಿಂತು ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಪ್ರಾರಂಭವಾಯಿತು. ಎರಡನೇ ಭಾರತ-ಪಾಕ್ ಯುದ್ಧ ಪ್ರಾರಂಭವಾಗಿ ಭಾರತದ ಪಡೆ ಲಾಹೋರ್ ತಲುಪುತ್ತಲೇ ಶಾಂತಿ ಒಪ್ಪಂದ ಮಾಡಿಕೊಳ್ಳಲಾಯಿತು.

ಜನವರಿ ೧೯೬೬ರಲ್ಲಿ ಶಾಸ್ತ್ರಿ ಮತ್ತು ಮಹಮ್ಮದ್ ಆಯೂಬ್ ಖಾನ್ ಅಲೆಕ್ಸೈ ನಿಕೊಲಯೆವಿಚ್ ಕೊಸಿಜಿನ್ ಅವರಿಂದ ಆಯೋಜಿಸಲಾದ ಟಾಷ್ಕೆಂಟ್‌ನಲ್ಲಿ ನಡೆದ ಮಾತುಕತೆಯಲ್ಲಿ ಭಾಗವಹಿಸಿದರು. ಶಾಸ್ತ್ರಿಗಳು ಭಾರತದೊಂದಿಗೆ ಜನವರಿ ೧೦ ರಂದು ಒಂದು ಒಪ್ಪಂದಕ್ಕೆ ಸಹಿ ಹಾಕಿದರು, ಅದೇ ಟಾಶ್ಕೆಂಟ್ ಡಿಕ್ಲೆರೇಶನ್. ಆದರೆ, ಮರುದಿನವೇ ಅವರು ಹೃದಯಾಘಾತದಿಂದ ಸಾವನ್ನಪ್ಪಿದರು. ಇವರು ಕಾರ್ಯಕಾಲದಲ್ಲಿ ದೇಶದಾಚೆ ಸಾವನ್ನಪ್ಪಿದ ಏಕೈಕ ಭಾರತದ ಪ್ರದಾನ ಮಂತ್ರಿ ಹಾಗು ಈ ತರಹದ ಅಂತಕ್ಕೆ ತುತ್ತಾದ ಇತಿಹಾಸದ ಬಹುಶಃ ಕೆಲವೇ ಕೆಲವು ಸರಕಾರದ ಮುಖ್ಯಸ್ಥರಲ್ಲಿ ಒಬ್ಬರು.

ಸಂಚಿಕೆ ೪

ಬೃಂದಾವನ ಉದ್ಯಾನ

ಕೃಷ್ಣರಾಜಸಾಗರ ಮೈಸೂರಿನ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟು. ಈ ಅಣೆಕಟ್ಟಿನ ಜೊತೆಗೇ ನಿರ್ಮಿಸಲಾದ ಬೃಂದಾವನ ಉದ್ಯಾನ ಉತ್ತಮವಾದ ಪ್ರವಾಸಿ ಆಕರ್ಷಣೆ. ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಜೀವನದಿಯಾದ ಕಾವೇರಿ ನದಿಗೆ ಅಡ್ಡಲಾಗಿ ಈ ಅಣೆಕಟ್ಟನ್ನು ಕಟ್ಟಲಾಗಿದೆ. ಮೈಸೂರಿನ ದಿವಾನರಾಗಿದ್ದ ಮೋಕ್ಷಗುಂಡಂ ವಿಶ್ವೇಶ್ವರಾಯ ಈ ಅಣೆಕಟ್ಟನ್ನು ಕಟ್ಟಿಸಿದ ಇಂಜಿನಿಯರರಲ್ಲಿ ಪ್ರಮುಖರು. ಈ ಅಣೆಕಟ್ಟು ೮೬೦೦ ಅಡಿ ಉದ್ದವಿದ್ದು ೧೩೦ ಅಡಿ ಎತ್ತರವಿದೆ. ಸ್ವಯಂಚಾಲಿತ ಸ್ಲ್ಯೂಸ್ ಗೇಟ್ ಗಳನ್ನು ಉಪಯೋಗಿಸಿದ ಪ್ರಪಂಚದ ಮೊದಲ ಅಣೆಕಟ್ಟುಗಳಲ್ಲಿ ಇದೂ ಒಂದು.

ಸಂಚಿಕೆ ೫

ಕ್ರಿಸ್ಮಸ್ ವೃಕ್ಷ

ಕ್ರಿಸ್ಮಸ್ ಕ್ರೈಸ್ತ ಕ್ಯಾಲೆಂಡರ್‌ನ ಒಂದು ಸಾಂಪ್ರದಾಯಿಕ ರಜಾ ದಿನ. ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ದಿನದಂದು ಯೇಸು ಕ್ರಿಸ್ತ‌ನ ಹುಟ್ಟುಹಬ್ಬವಾಗಿ ಇದನ್ನು ಆಚರಿಸಲಾಗುತ್ತದೆ. ಕ್ರಿಸ್ಮಸ್ ಹಬ್ಬದ ಹಿ೦ದಿನ ದಿನವನ್ನು ಕ್ರಿಸ್ಮಸ್ ಈವ್ ಎ೦ಬ ಹೆಸರಿನಲ್ಲಿ ಆಚರಿಸಲಾಗುತ್ತದೆ. ಕ್ರಿಸ್ಮಸ್ ನ ಆಚರಣೆಯಲ್ಲಿ ಮುಖ್ಯವಾಗಿ ಕ್ರಿಸ್ಮಸ್ ವೃಕ್ಷವನ್ನು ಮನೆಯಲ್ಲಿಡುವುದು, ಮಿಸಲ್‍ಟೋ ಮೊದಲಾದ ಮರಗಳ ಎಲೆಗಳ ತೋರಣ ಕಟ್ಟುವುದು, ಉಡುಗೊರೆಗಳನ್ನು ಕೊಡುವುದು ಮೊದಲಾದವನ್ನು ಕಾಣಬಹುದು.

ಸಂಚಿಕೆ ೬

ಕ್ರಿಸ್ಮಸ್ ವೃಕ್ಷ

ಶ್ರೀನಿವಾಸ ರಾಮಾನುಜನ್ (ಡಿಸ೦ಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) ಭಾರತದ ಪ್ರಸಿದ್ಧ ಗಣಿತಜ್ಞರು. ಸಣ್ಣ ವಯಸ್ಸಿನಿ೦ದಲೇ ಅಸಾಧಾರಣ ಪ್ರತಿಭೆ ತೋರಿದ ರಾಮಾನುಜನ್ ವಿಶ್ವವಿದ್ಯಾಲಯದಲ್ಲಿ ಸಾ೦ಪ್ರದಾಯಿಕ ಶಿಕ್ಷಣ ಪಡೆಯದೆ ಸ್ವ-ಶಿಕ್ಷಿತ ಗಣಿತಜ್ಞರೂ ಹೌದು. ಮುಖ್ಯವಾಗಿ ಸ೦ಖ್ಯಾಶಾಸ್ತ್ರದಲ್ಲಿ ಸ೦ಶೋಧನೆ ನಡೆಸಿದ ರಾಮಾನುಜನ್ ಅನೇಕ ಸ೦ಕಲನ ಸೂತ್ರಗಳನ್ನು ಪ್ರತಿಪಾದಿಸಿದ್ದಕ್ಕಾಗಿ ವಿಶೇಷವಾಗಿ ಪ್ರಸಿದ್ಧರು.

ಸಂಚಿಕೆ ೭

ಖಜುರಾಹೊ ಶಿಲ್ಪಕಲೆ

ಖಜುರಾಹೊ ಭಾರತದ ಮಧ್ಯ ಪ್ರದೇಶದಲ್ಲಿರುವ ಒ೦ದು ನಗರ, ದೆಹಲಿಯಿ೦ದ ೬೨೦ ಕಿಮೀ ದಕ್ಷಿಣದಲ್ಲಿದೆ. ಭಾರತದ ಅತ್ಯ೦ತ ಜನಪ್ರಿಯ ಪ್ರವಾಸಿ ಆಕರ್ಷಣೆಗಳಲ್ಲಿ ಒ೦ದಾದ ಖಜುರಾಹೊ, ಮಧ್ಯಕಾಲೀನ ಹಿ೦ದೂ ದೇವಾಲಯಗಳ ಅತಿ ದೊಡ್ಡ ಗು೦ಪು. ಇದು ಇಲ್ಲಿನ ಶೃ೦ಗಾರಮಯ ಶಿಲ್ಪಕಲೆಗಳಿಗೆ ಹೆಸರಾಗಿದೆ. ಪ್ರತಿ ದ್ವಾರದ ಎರಡು ಬದಿಯಲ್ಲಿಯೂ ಖರ್ಜೂರದ ವೃಕ್ಷಗಳಿದ್ದುದರಿ೦ದ ಈ ಸ್ಥಳಕ್ಕೆ "ಖಜುರಾಹೊ" ಎ೦ಬ ಹೆಸರು ಬ೦ದಿತೆ೦ದು ಹೇಳಲಾಗುತ್ತದೆ. ಮೊದಲಿಗೆ ಎ೦ಬತ್ತಕ್ಕೂ ಹೆಚ್ಚು ದೇವಸ್ಥಾನಗಳು ಇಲ್ಲಿದ್ದವು. ಆದರೆ ಈಗ ೨೨ ದೇವಸ್ಥಾನಗಳು ಮಾತ್ರ ಸುಮಾರು ಒಳ್ಳೆಯ ಪರಿಸ್ಥಿತಿಯಲ್ಲಿದ್ದು, ೨೨ ಚ. ಕಿಮೀ ವಿಸ್ತೀರ್ಣವುಳ್ಳ ಪ್ರದೇಶದಲ್ಲಿವೆ. ಖಜುರಾಹೊದಲ್ಲಿರುವ ದೇವಸ್ಥಾನಗಳ ಸಮೂಹ ಯುನೆಸ್ಕೋದಿ೦ದ "ಪ್ರಪ೦ಚ ಸ೦ಸ್ಕೃತಿ ಕ್ಷೇತ್ರ" ಎ೦ದು ಮಾನ್ಯತೆ ಪಡೆದಿದೆ.

ಸಂಚಿಕೆ ೮

ಮಹಾಭಾರತ ಯುದ್ಧದಲ್ಲಿ ಅರ್ಜುನ ಮತ್ತು ಕೃಷ್ಣ

ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒ೦ದು. ಇದು ಹಿ೦ದೂ ಧರ್ಮದ ಒ೦ದು ಮುಖ್ಯ ಪಠ್ಯವೂ ಹೌದು. ವಿಶ್ವ ಸಾಹಿತ್ಯದ ಸಾಧನೆಗಳಲ್ಲಿ ಒ೦ದೆ೦ದು ಪರಿಗಣಿತವಾಗಿರುವ ಮಹಾಭಾರತ ಭಾರತೀಯ ಜನರ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ. ಸ೦ಪೂರ್ಣ ಮಹಾಭಾರತ ಒ೦ದು ಲಕ್ಷಕ್ಕೂ ಹೆಚ್ಚು ಶ್ಲೋಕಗಳನ್ನು ಒಳಗೊ೦ಡಿದ್ದು ಗ್ರೀಕ್ ಮಹಾಕಾವ್ಯಗಳಾದ ಇಲಿಯಡ್ ಮತ್ತು ಒಡಿಸ್ಸಿ - ಎರಡನ್ನೂ ಸೇರಿಸಿದರೂ ಮಹಾಭಾರತದ ಏಳನೇ ಒ೦ದು ಭಾಗದಷ್ಟು ಮಾತ್ರ ಆಗುತ್ತದೆ.

ಸಂಚಿಕೆ ೯

ಮೈಸೂರು ಅರಮನೆ

ಮೈಸೂರು ' ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ'. ಮೈಸೂರು ಜಿಲ್ಲೆಯ ಆಡಳಿತ ಕೇಂದ್ರ, ಮತ್ತು ಹಿಂದಿನ ಮೈಸೂರು ಸಂಸ್ಥಾನದ ರಾಜಧಾನಿ. ಇಲ್ಲಿ ಹಲವು ಸುಂದರ ಅರಮನೆಗಳಿರುವುದರಿಂದ ಕೆಲವೊಮ್ಮೆ ಅರಮನೆಗಳ ನಗರ ಎಂದೂ ಕರೆಯುತ್ತಾರೆ. ಭಾರತದ ಅತಿ ಹಳೆಯ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಮೈಸೂರು ವಿಶ್ವವಿದ್ಯಾಲಯ ಇದೇ ನಗರದಲ್ಲಿದೆ. ಇತರ ಹೆಸರುವಾಸಿ ಸಂಶೋಧನಾ ಸಂಸ್ಥೆಗಳಾದ ಕೇಂದ್ರ ಆಹಾರ ತಂತ್ರಜ್ಞಾನ ಸಂಶೋಧನಾ ಕೇಂದ್ರ (ಸಿಎಫ್‌ಟಿಆರ್‌ಐ), ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ (ಡಿಎಫ್‌ಆರ್‌ಎಲ್)ಗಳಿಗೂ ಮೈಸೂರು ಮನೆಯಾಗಿದೆ. ಕುವೆಂಪು, ಮೋಕ್ಷಗುಂಡಂ ವಿಶ್ವೇಶ್ವರಾಯ, ಬಿ ಎಂ ಶ್ರೀ, ಆರ್ ಕೆ ನಾರಾಯಣ್ ಮುಂತಾದ ಹಲವು ಪ್ರಮುಖರಿಗೆ ಮನೆಯಾಗಿದ್ದ ಈ ಊರು ಕರ್ನಾಟಕದ ಪ್ರಸಿದ್ಧ ಪ್ರವಾಸಿ ಆಕರ್ಷಣೆಗಳಲ್ಲಿ ಹಲವನ್ನು ಒಳಗೊಂಡಿದೆ.

ಸಂಚಿಕೆ ೧೦

ಮೌರ್ಯ ಸಾಮ್ರಾಜ್ಯ ಭಾರತ ಒಗ್ಗೂಡಿಸಿದ ಮೊದಲ ದೊಡ್ಡ ಸಾಮ್ರಾಜ್ಯ. ಕ್ರಿ.ಪೂ. ೩೨೧ ರಿ೦ದ ಕ್ರಿ.ಪೂ. ೧೮೫ ರ ವರೆಗೆ ಅಸ್ತಿತ್ವದಲ್ಲಿದ್ದ ಈ ಸಾಮ್ರಾಜ್ಯ, ಮೌರ್ಯ ವ೦ಶದ ಚಕ್ರವರ್ತಿಗಳಿ೦ದ ಆಳಲ್ಪಟ್ಟಿತ್ತು. ಇದರ ತುಟ್ಟತುದಿಯಲ್ಲಿ ಇದು ಆಧುನಿಕ ಭಾರತದ ಬಹುಭಾಗವನ್ನು ಒಳಗೊ೦ಡಿತ್ತಲ್ಲದೆ, ಪಾಕಿಸ್ತಾನ ಮತ್ತು ಭಾಗಶಃ ಅಫ್ಘಾನಿಸ್ತಾನಗಳನ್ನೂ ಒಳಗೊ೦ಡಿತ್ತು. ಕ್ರಿ.ಪೂ. ೩೨೬ ರಲ್ಲಿ 'ಗ್ರೀಸ್'ನ ಅಲೆಕ್ಸಾ೦ಡರ್ ಭಾರತದ ಉತ್ತರಪಶ್ಚಿಮ ಭಾಗದ ಕೆಲ ರಾಜ್ಯಗಳನ್ನು ಗೆದ್ದ ನ೦ತರ ಸಾಮ೦ತ ರಾಜ್ಯಗಳನ್ನು ಸ್ಥಾಪಿಸಿದ (ಸತ್ರಪಗಳು). ಬೇಗನೆಯೇ ಅಲೆಕ್ಸಾ೦ಡರ್ ಭಾರತದಿ೦ದ ಹಿ೦ದಿರುಗಿ ಕ್ರಿ.ಪೂ. ೩೨೩ ರಲ್ಲಿ ನಿಧನನಾದ ನ೦ತರ ಆತನ ಸಾಮ್ರಾಜ್ಯ ಹ೦ಚಿಹೋಗಲಾರ೦ಭಿಸಿತು. ಆಗ ಸೃಷ್ಟಿಯಾದ ಅವಕಾಶಗಳನ್ನು ಭಾರತದಲ್ಲಿ ಉಪಯೋಗಿಸಿಕೊ೦ಡದ್ದು ಚ೦ದ್ರಗುಪ್ತ ಮೌರ್ಯ. ಚ೦ದ್ರಗುಪ್ತ ಮೌರ್ಯ ಚಾಣಕ್ಯನ ಸಹಾಯದಿಂದ ರಾಜ್ಯವನ್ನು ನಿರ್ಮಿಸಿದ. ಚ೦ದ್ರಗುಪ್ತ ಮೌರ್ಯನ ನಂತರ ಅವನ ವಂಶದ ಬಿ೦ದುಸಾರ, ಅಶೋಕ ಮೌರ್ಯ ಸಾಮ್ರಾಜ್ಯವನ್ನು ಮತ್ತಷ್ಟು ವಿಸ್ತರಿಸಿದರು.

ಸಂಚಿಕೆ ೧೧

ತಾಜ್ ಮಹಲ್ ಭಾರತದ ಆಗ್ರಾ ನಗರದಲ್ಲಿ ಇರುವ ಸ್ಮಾರಕ. ಇದನ್ನು ಮೊಘಲ್ ಸಾಮ್ರಾಜ್ಯದ ಚಕ್ರವರ್ತಿ ಷಹ ಜಹಾನ್ ತನ್ನ ರಾಣಿ ಅರ್ಜುಮನ್ ಬಾನು ಬೇಗಮ್ (ನ೦ತರ ಮಮ್ತಾಜ್ ಮಹಲ್) ಳ ಗೋರಿಯಾಗಿ ಮತ್ತು ಆಕೆಯ ಸ್ಮರಣಾರ್ಥ ಕಟ್ಟಿಸಿದ್ದು. ಸ್ಮಾರಕವನ್ನು ಕಟ್ಟಲು ೨೩ ವರ್ಷಗಳು ಬೇಕಾದವು (೧೬೩೦-೧೬೫೩).

"ತಾಜ್ ಮಹಲ್" ಎ೦ಬ ಹೆಸರಿನ ವ್ಯುತ್ಪತ್ತಿ ಏನೆ೦ದು ಸರಿಯಾಗಿ ತಿಳಿದುಬ೦ದಿಲ್ಲ. ಷಹ ಜಹಾನನ ಆಸ್ಥಾನದ ಕಡತಗಳಲ್ಲಿ ಇದರ ಪ್ರಸ್ತಾಪ "ಮಮ್ತಾಜ್ ಮಹಲಳ ರೌಜಾ" (ರೌಜಾ ಎ೦ದರೆ ಗೋರಿ) ಎ೦ದಷ್ಟೆ ಇದೆ. "ತಾಜ್" ಎ೦ಬುದು ರಾಣಿಯ ಹೆಸರಾದ ಮಮ್ತಾಜ್ ಎ೦ಬುದರ ಚುಟುಕುರೂಪ ಇದ್ದೀತು. ಜನಪ್ರಿಯ ವಾಡಿಕೆಯಲ್ಲಿ ಕೆಲವರು ಇದನ್ನು ಕರೆಯುವುದು "ವಾಹ್! ತಾಜ್!" ಎ೦ದು.

ತಾಜಾ, ಎಂದೆಂದಿಗೂ ಹೊಚ್ಚ ಹೊಸತಾಗಿಯೇ ಇರುವ, ಮಹಲು, ಕಟ್ಟಡ, ಆದ್ದರಿಂದ ಎಂದೆಂದಿಗೂ ಹೊಚ್ಚಹೊಸತಾಗಿಯೇ ಇರುವ ಸುಂದರ ಕಟ್ಟಡ ಎಂದು ಕವಿ ದ ರಾ ಬೇಂದ್ರೆಯವರು ಬಣ್ಣಿಸುತ್ತಾರೆ.

"ತಾಜ್ ಮಹಲ್" ಹಿ೦ದೊಮ್ಮೆ "ತೇಜೋ ಮಹಾಲಯ" ಎ೦ಬ ಹಿ೦ದೂ ದೇವಸ್ಥಾನವಾಗಿತ್ತು ಎ೦ದು ಪ್ರತಿಪಾದಿಸಿದವರೂ ಇದ್ದಾರೆ.

೧೯೮೩ ರಲ್ಲಿ ತಾಜ್ ಮಹಲ್ ಅನ್ನು ಯುನೆಸ್ಕೋ ಪ್ರಪ೦ಚ ಸ೦ಸ್ಕೃತಿ ಕ್ಷೇತ್ರ ಎ೦ದು ಘೋಷಿಸಿದೆ.

ಸಂಚಿಕೆ ೧೨

"ಬಣ್ಣದ ತಗಡಿನ ತುತ್ತೂರಿ, ಕಾಸಿಗೆ ಕೊಂಡನು ಕಸ್ತೂರಿ" ಎಂಬ ಶಿಶು ಗೀತೆಯಿಂದ, ಎಂಡಕುಡುಕ ರತ್ನನ ಪದಗಳನ್ನಲ್ಲದೆ ನೂರಾರು ಕೃತಿಗಳನ್ನು ರಚಿಸಿ ಕನ್ನಡ ಕಾಯ್ದ, ಬೋಧಿಸಿದ `ಮೇಷ್ಟ್ರು' ಆಗಿ ಹೆಸರಾದವರು ಜಿ ಪಿ ರಾಜರತ್ನಂ ಅವರು.
ಕಷ್ಟ ಕಾರ್ಪಣ್ಯಗಳ ನಡುವೆ ೧೯೩೮ರಲ್ಲಿ ಕನ್ನಡ ಪಂಡಿತ ಹುದ್ದೆ ರಾಜರತ್ನಂ ಅವರನ್ನು ಹುಡುಕಿ ಬಂತು. ಮೈಸೂರು, ಬೆಂಗಳೂರು, ಶಿವಮೊಗ್ಗ, ತುಮಕೂರುಗಳಲ್ಲಿ ಅಧ್ಯಾಪಕರಾಗಿ, ಮೆಚ್ಚಿನ ಮೇಸ್ಟ್ರು ಆಗಿ ಖ್ಯಾತರಾದರು. ೧೯೭೬ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಹಾಗೂ ಶಿವಮೊಗ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಜಿ. ಪಿ. ರಾಜರತ್ನಂ ೧೯೬೯ರಲ್ಲೇ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು. ೧೯೭೭ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಪದವಿ ಲಭಿಸಿತು. ೧೯೭೮ರಲ್ಲಿ ದೆಹಲಿಯಲ್ಲಿ ಸುವರ್ಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ೧೯೭೯ರಲ್ಲಿ ಧರ್ಮಸ್ಥಳ ಸಾಹಿತ್ಯ ಸಮ್ಮೇಳನದಲ್ಲಿ ಮಕ್ಕಳ ಸಾಹಿತ್ಯ ಗೋಷ್ಠಿ ಅಧ್ಯಕ್ಷತೆ ವಹಿಸಿದ್ದರು.
``ರತ್ನನ ಪದಗಳು" ರಾಜರತ್ನಂ ಅವರ ವಿಶಿಷ್ಟ ಕೊಡುಗೆ. ಇದರಲ್ಲಿ ಅವರ ಜೀವನ ದರ್ಶನವಿದೆ. ಕುಡುಕನೆಂಬ ಹೀಯಾಳಿಕೆಗೆ ಗುರಿಯಾದ ಬಡವನೊಬ್ಬನ ಕಾಣ್ಕೆ, ನೋವು, ನಲಿವು, ಒಲವು, ಗೆಲವು, ಸೋಲು ಎಲ್ಲಾ ಈ ಕಾವ್ಯದಲ್ಲಿ ಮೈದುಂಬಿವೆ. ಟಿ ಪಿ ಕೈಲಾಸಂ ಅವರ ಸಾಹಿತ್ಯ ಪ್ರಭಾವ, ಭಾಷೆ ಬಳಕೆ ರಾಜರತ್ನಂ ಅವರ ಮೇಲಾಗಿರುವುದು ಕಾಕತಾಳೀಯ ಇರಬಹುದು.

ಸಂಚಿಕೆ ೧೪

ಯಕ್ಷಗಾನ - ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷಭೂಷಣಗಳನ್ನೊಳಗೊಂಡ ಒಂದು ಶಾಸ್ತ್ರೀಯ ಕಲೆ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ (ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ) ಹಾಗೂ ಈ ಜಿಲ್ಲೆಗಳಿಗೆ ಅಂಟಿಕೊಂಡಿರುವ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯಕ್ಷಗಾನವು ಮನೆ ಮಾತಾಗಿದೆ.

ಯಕ್ಷಗಾನದಲ್ಲಿ ಅನೇಕ ರೀತಿಯ ಪ್ರಭೇದಗಳಿದ್ದು ಅವುಗಳಲ್ಲಿ ಯಕ್ಷಗಾನ ಬಯಲಾಟವು ಅತ್ಯಂತ ಜನಪ್ರಿಯವಾದುದು. ಜನರು ಇದನ್ನು ಸರಳವಾಗಿ "ಆಟ" ಎಂದೂ ಕರೆಯುತ್ತಾರೆ. ಬಯಲಾಟದಲ್ಲಿ ವೇಷಭೂಷಣ, ರಂಗಸ್ಥಳ, ಭಾಗವತಿಕೆ (ಹಾಡುಗಾರಿಕೆ), ಅಭಿನಯ, ಮಾತುಗಾರಿಕೆ, ನೃತ್ಯ - ಹೀಗೆ ಸಾಂಪ್ರದಾಯಿಕ ಯಕ್ಷಗಾನದ ಎಲ್ಲ ಮಜಲುಗಳನ್ನೂ ಕಾಣಬಹುದು. ಬಯಲಾಟಗಳಲ್ಲಿ "ತೆಂಕುತಿಟ್ಟು" ಮತ್ತು "ಬಡಗುತಿಟ್ಟು ಎಂಬ ಎರಡು ಪ್ರಮುಖ ಪ್ರಭೇದಗಳನ್ನು ಕಾಣಬಹುದು. ಉತ್ತರ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಡಗುತಿಟ್ಟು ಶೈಲಿಯ ಬಯಲಾಟಗಳು ಕಂಡುಬಂದರೆ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ತೆಂಕು ತಿಟ್ಟು ಶೈಲಿಯ ಯಕ್ಷಗಾನವನ್ನು ಕಾಣಬಹುದು. ವೇಷಭೂಷಣಗಳ ವಿನ್ಯಾಸ, ನೃತ್ಯದ ಶೈಲಿ, ಭಾಗವತಿಕೆ ಮತ್ತು ಹಿಮ್ಮೇಳಗಲ್ಲಲ್ಲಿ ಕಂಡುಬರುವ ಕೆಲವು ವ್ಯತ್ಯಾಸಗಳ ಆಧಾರದ ಮೇಲೆ ಈ ವಿಂಗಡನೆಯನ್ನು ಮಾಡಲಾಗಿದೆಯೇ ಹೊರತು ಯಕ್ಷಗಾನದ ಮೂಲ ತತ್ವ, ಆಶಯಗಳು ಎರಡೂ ಶೈಲಿಗಳಲ್ಲಿಯೂ ಒಂದೇ ಆಗಿರುತ್ತದೆ.

ಸಂಚಿಕೆ ೧೫

ಚದುರಂಗ (ಚೆಸ್) ಇಬ್ಬರು ಆಟಗಾರರಿಂದ ಆಡಲ್ಪಡುವ ಒಂದು ಆಟ - ಇದನ್ನು ೬೪ ಚೌಕಗಳಿರುವ ಮಣೆಯ ಮೇಲೆ ಆಡಲಾಗುತ್ತದೆ. ಮಣೆಯ ಮೇಲಿನ ಚೌಕಗಳು ಕಪ್ಪು ಮತ್ತು ಬಿಳುಪು ಬಣ್ಣಗಳಿಂದ ಕೂಡಿದ್ದ ಒಂದು ಕಪ್ಪು ಮತ್ತು ಒಂದು ಬಿಳಿ - ಹೀಗೆ ಜೋಡಿಸಲ್ಪಟ್ಟಿರುತ್ತವೆ. ಆಟದ ಪ್ರಾರಂಭದಲ್ಲಿ ಪ್ರತಿ ಆಟಗಾರನ ಬಳಿ ೧೬ ಕಾಯಿಗಳಿರುತ್ತವೆ - ಒಂದು ರಾಜ, ಒಂದು ಮಂತ್ರಿ, ಎರಡು ಆನೆ, ಎರಡು ಕುದುರೆ, ಎರಡು ಒಂಟೆ ಮತ್ತು ಎಂಟು ಪದಾತಿಗಳು. ಒಬ್ಬ ಆಟಗಾರನ ಕಾಯಿಗಳು ಸಾಮಾನ್ಯವಾಗಿ ಬಿಳಿ ಬಣ್ಣದವಾಗಿದ್ದು ಇನ್ನೊಬ್ಬ ಆಟಗಾರನವು ಕಪ್ಪು ಬಣ್ಣದವಾಗಿರುತ್ತವೆ. ಪ್ರತಿ ಕಾಯಿಯೂ ಸಹ ವಿಶಿಷ್ಟ ರೀತಿಯಲ್ಲಿ ಚಲಿಸುತ್ತದೆ ಹಾಗೂ ಎದುರಾಳಿಯ ಕಾಯಿಗಳ ಮೇಲೆ ದಾಳಿ ನಡೆಸಬಲ್ಲುದು. ಆಟದ ಉದ್ದೇಶ ಎದುರಾಳಿಯ ರಾಜ ಮೇಲೆ ದಾಳಿ ನಡೆಸಿ ರಾಜನಿಗೆ ತಪ್ಪಿಸಿಕೊಳ್ಲಲು ಯಾವ ಚೌಕಗಳೂ ಇಲ್ಲದ ಹಾಗೆ ಮಾಡುವುದು - ಇದಕ್ಕೆ ಚೆಕ್‍ಮೇಟ್ ಎಂದು ಕರೆಯಲಾಗುತ್ತದೆ.

ಸಂಚಿಕೆ ೧೬

ಮೋಹನ್ ದಾಸ್ ಕರಮ್‍ಚ೦ದ್ ಗಾ೦ಧಿ (ಅಕ್ಟೋಬರ್ ೨, ೧೮೬೯ - ಜನವರಿ ೩೦, ೧೯೪೮), ಜನಪ್ರಿಯವಾಗಿ ಮಹಾತ್ಮ ಗಾ೦ಧಿ, ಆಧುನಿಕ ಭಾರತ ದೇಶದ ಪಿತಾಮಹರಲ್ಲಿ ಒಬ್ಬರು, ಮತ್ತು ಭಾರತೀಯ ಸ್ವಾತ೦ತ್ರ್ಯ ಚಳುವಳಿಯ ಪ್ರಭಾವಶಾಲಿ ನಾಯಕರು ಮತ್ತು ಸತ್ಯಾಗ್ರಹಿಗಳು.

ಬ್ರಿಟಿಷ್ ಆಡಳಿತದಿ೦ದ ಭಾರತ ಸ್ವಾತ೦ತ್ರ್ಯ ಪಡೆಯುವುದರಲ್ಲಿ ಮುಖ್ಯ ಪಾತ್ರ ವಹಿಸಿದರಲ್ಲದೆ, ಪರದೇಶದ ಆಡಳಿತಕ್ಕೆ ಒಳಗಾಗಿದ್ದ ಇತರ ದೇಶಗಳಲ್ಲಿಯೂ ಸ್ವಾತ೦ತ್ರ್ಯ ಚಳುವಳಿಗೆ ಸ್ಫೂರ್ತಿ ತ೦ದರು. ಮಾರ್ಟಿನ್ ಲೂಥರ್ ಕಿ೦ಗ್, ನೆಲ್ಸನ್ ಮ೦ಡೇಲಾ ಮೊದಲಾದ ಅಹಿ೦ಸಾವಾದಿ ಹೋರಾಟಗಾರರು ಗಾ೦ಧೀಜಿಯವರ ಸತ್ಯಾಗ್ರಹದ ತತ್ವದಿ೦ದ ಆಳವಾಗಿ ಪ್ರಭಾವಿತರಾದವರು. ಗಾ೦ಧೀಜಿಯವರ ಹೇಳಿಕೆಯ೦ತೆ, ಅವರ ಮೌಲ್ಯಗಳು ಸರಳ ಧಾರ್ಮಿಕ ನ೦ಬಿಕೆಗಳಿ೦ದ ಬ೦ದ೦ಥವು: ಸತ್ಯ ಮತ್ತು ಅಹಿ೦ಸೆ.

ಮಹಾತ್ಮರ ಜನ್ಮದಿನವಾದ ಅಕ್ಟೋಬರ್ ೨ರಂದು ಪ್ರತಿ ವರ್ಷ ಭಾರತ ದೇಶಾದ್ಯಂತ 'ಗಾಂಧಿ ಜಯಂತಿ' ಆಚರಿಸಲಾಗುತ್ತದೆ.

ಸಂಚಿಕೆ ೧೭

೨೦ನೆ ಶತಮಾನದಲ್ಲಿ ಮೈಸೂರು ಸಂಸ್ಥಾನ, ಮುಂಬೈ ಆಧಿಪತ್ಯ , ಹೈದರಾಬಾದ್ ನಿಜಾಮ ಸಂಸ್ಥಾನ ಮತ್ತು ಮದ್ರಾಸ್ ಆಧಿಪತ್ಯಗಳ ನಡುವೆ ಹರಿದು ಹಂಚಿ ಹೋಗಿದ್ದ ಕನ್ನಡ ಭಾಷಿಗರ ನಾಡು ೫೦ ವರ್ಷಗಳ ಹಿಂದೆ ನವೆಂಬರ್ ೧ ೧೯೫೬ರಲ್ಲಿ ಏಕೀಕರಣಗೊಂಡು ಮೈಸೂರು ರಾಜ್ಯ ಎಂಬ ಹೆಸರು ಪಡೆಯಿತು. ತದನಂತರ ೧೯೭೩ ನವೆಂಬರ್ ೧ ರೊಂದು ಕರ್ನಾಟಕ ಎಂದು ನಾಮಕರಣಗೊಂಡಿತು. ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವನ್ನು ವಿಶ್ವಾದ್ಯಂತ ಕನ್ನಡಿಗರು ಉತ್ಸಾಹದಿಂದ ಆಚರಿಸುತ್ತಿದ್ದಾರೆ. ಕವಿ ಕುವೆಂಪು ನಾಡ ಗೀತೆಯಲ್ಲಿ ಸ್ತುತಿಸಿದಂತೆ ರಸ ಋಷಿಗಳ ಈ ಬೀಡಿನ ಜನರು ಕಳೆದ ೫೦ ವರ್ಷಗಳಲ್ಲಿ ಸಾಹಿತ್ಯ, ಕಲೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆಗಳನ್ನು ಮಾಡಿ ಕನ್ನಡ ನಾಡಿಗೆ ಮತ್ತು ಅದರ ಜನನಿಯಾದ ಭಾರತಕ್ಕೆ ಅಪಾರ ಗೌರವ ತಂದಿದ್ದಾರೆ.

ಸಂಚಿಕೆ ೧೮

ವುಲ್ಫ್‌ಗ್ಯಾಂಗ್ ಅಮೆಡಿಯುಸ್ ಮೊಟ್ಜಾರ್ಟ್ ಜಗತ್ತಿನ ಶ್ರೇಷ್ಟ ಸಂಗೀತಗಾರರ ಸಾಲಿನಲ್ಲಿ ಅಗ್ರಮಾನ್ಯರು. ತಮ್ಮ ೮ನೆ ವಯಸ್ಸಿನಲ್ಲಿಯೆ ಸಿಂಫೊನಿ ರಚಿಸಿ ಅಸಾಮಾನ್ಯ ಸಂಗೀತ ಪ್ರತಿಭೆಯನ್ನು ತೋರಿದ ಮೊಟ್ಜಾರ್ಟ್, ತಮ್ಮ ೩೫ ವರ್ಷದ ಅಲ್ಪಾಯುಷ್ಯದಲ್ಲಿ ೪೧ ಸಿಂಫೊನಿ, ೨೭ ಪಿಯಾನೋ ಕಾನ್ಸರ್ಟೋಗಳು, ೧೬ ಆಪೇರಾ, ೧೯ ಪಿಯಾನೋ ಸೊನಾಟಗಳು ಮತ್ತು ೨೩ ತಂತಿ ಕ್ವಾರ್ಟೆಟ್(ನಾಲ್ಕು ವಾದ್ಯಗಳ ವೃಂದ ಸಂಗೀತ)ಸೇರಿದಂತೆ ೬೦೦ಕ್ಕೂ ಮೇಲ್ಪಟ್ಟ ಸಂಗೀತ ಕೃತಿಗಳ ಬೃಹತ್ ಭಂಡಾರ ಸೃಷ್ಟಿಸಿದರು. ಇಂದಿಗೂ ಕೆಲವು ಮೊಟ್ಜಾರ್ಟ್ ಕೃತಿಗಳನ್ನು ನುಡಿಸಲು ಅಪಾರ ಪಾಂಡಿತ್ಯ, ಪ್ರೌಢಿಮೆ ಮತ್ತು ಪರಿಣಿತಿ ಬೇಕು. ಇಂದಿನ ಆಸ್ಟ್ರಿಯಾದಲ್ಲಿರುವ ಸಾಲ್ಜ್‌ಬರ್ಗ್ ಎಂಬ ಊರಿನಲ್ಲಿ ಜನವರಿ ೨೭,೧೭೫೬ ರೊಂದು ಜನಿಸಿದ ಮೊಟ್ಜಾರ್ಟ್‌ರ ಜನ್ಮದ ೨೫೦ನೆ ವಾರ್ಷಿಕೋತ್ಸವ ಈ ವರ್ಷ ವಿಶ್ವಾದ್ಯಂತ ಸಂಗೀತ ಪ್ರೇಮಿಗಳು ಆಚರಿಸುತ್ತಿದ್ದಾರೆ.

ಸಂಚಿಕೆ ೧೯
ಅ.ನ.ಕೃಷ್ಣರಾಯ

[ಬದಲಾಯಿಸಿ] ಅ.ನ. ಕೃಷ್ಣರಾಯರು

ಅನಕೃ (ಅರಕಲಗೂಡು ನರಸಿಂಗರಾಯ ಕೃಷ್ಣರಾಯರು) ಕನ್ನಡ ಸಾಹಿತ್ಯಲೋಕದ ಪ್ರಮುಖರಲ್ಲೊಬ್ಬರು. ನೂರಾ ಹತ್ತು ಕಾದಂಬರಿಗೆಳನ್ನು ಬರೆದಿರುವ ಅನಕೃ ಕಾದಂಬರಿ ಸಾರ್ವಭೌಮರೆಂದು ಪ್ರಖ್ಯಾತರಾಗಿದ್ದರು. ಪ್ರಗತಿಶೀಲ ಸಾಹಿತ್ಯ ಚಳುವಳಿಯ ಪ್ರಮುಖರೆಂದು ಕರೆಸಿಕೊಂಡವರು. ಅವರ ಸಂಧ್ಯಾರಾಗ, ಉದಯರಾಗ, ನಟಸಾರ್ವಭೌಮ, ಮಂಗಳಸೂತ್ರ ಮುಂತಾದ ಕಾದಂಬರಿಗಳು ಜನಪ್ರಿಯವಾಗಿವೆ. ಶ್ರೀಸಾಮಾನ್ಯನಿಗೂ ಅರ್ಥವಾಗುವಂತಹ ಸರಳವಾದ ಭಾಷೆ ಉಪಯೋಗಿಸಿ ಬರೆಯುತ್ತಿದ್ದವರಲ್ಲೊಬ್ಬರು. ಅನಕೃ ಪ್ರಸಿದ್ಧ ವಾಗ್ಮಿ, ಕೂಡ. ನೇರ,ನಿಷ್ಟುರ ವ್ಯಕ್ತಿತ್ವ ಅನಕೃ ಅವರದ್ದೆಂದು ಹೇಳಲಾಗುತ್ತದೆ.

ಅನಕೃ ಮಾಡಿದ ಅತಿ ಮಹತ್ತರ ಕಾರ್ಯವೆಂದರೆ ಕನ್ನಡ ಚಳುವಳಿಗಳನ್ನು ಹುಟ್ಟು ಹಾಕಿದ್ದು. ಕನ್ನಡಿಗರ ಸ್ವಾಭಿಮಾನವನ್ನು ತಮ್ಮ ಸಿಡಿಲನುಡಿಗಳಂತಹ ಭಾಷಣಗಳ ಮೂಲಕ ಬಡಿದೆಬ್ಬಿಸಿದರು. ಕರ್ನಾಟಕದಲ್ಲಿ ಕನ್ನಡಕ್ಕೆ ಬೆಲೆ ಇಲ್ಲದಂತಾಗಿದ್ದ ಪರಿಸ್ಥಿತಿಯಲ್ಲಿ ಕನ್ನಡದ ಪಾಂಚಜನ್ಯ ಮೊಳಗಿಸಿದರು ಅನಕೃ. "ಕನ್ನಡ ನಮ್ಮ ಭಾಷೆ. ಅದನ್ನು ಮರೆತು ಬಾಳುವುದು ಮೂರ್ಖತನ, ಕರ್ನಾಟಕದಲ್ಲಿ ಕನ್ನಡಕ್ಕೆ ಪ್ರಧಾನ ಪೂಜೆ ಸಲ್ಲಬೇಕು, ಕನ್ನಡ ಚಲನಚಿತ್ರಗಳು ಪ್ರದರ್ಶನಗೊಳ್ಳಬೇಕು, ಕನ್ನಡ ಆಡಳಿತ ಭಾಷೆಯಾಗಬೇಕು" ಎಂದು ಹೋರಾಟ ಮಾಡಿ ಮಾಸ್ತಿಯವರಿಂದ "ಅಚ್ಚ ಕನ್ನಡಿಗ" ಎಂಬ ಪ್ರಶಂಸೆ ಪಡೆದುಕೊಂಡವರು ಅನಕೃ.

ಸಂಚಿಕೆ ೨೦
ಕರ್ನಾಟಕ ರತ್ನ, ಪದ್ಮಭೂಷಣ ಡಾ. ರಾಜ್‍ಕುಮಾರ್

[ಬದಲಾಯಿಸಿ] ಡಾ. ರಾಜ್‍ಕುಮಾರ್

ನಟಸಾರ್ವಭೌಮ ಡಾ. ರಾಜ್‍ಕುಮಾರ್ (ಜನನ: ೨೪ ಏಪ್ರಿಲ್ ೧೯೨೯ - ಮರಣ: ೧೨ ಏಪ್ರಿಲ್ ೨೦೦೬) ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ, ೨೦೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ. ರಾಜ್ ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಮತ್ತು ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸಹ ಲಭಿಸಿವೆ. ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಎಂದು ಪುರಸ್ಕೃತರಾದವರು.

ಬೇಡರ ಕಣ್ಣಪ್ಪ ಚಿತ್ರದಲ್ಲಿ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಡಾ.ರಾಜ್ ಅವರ ಕೊನೆಯ ಚಿತ್ರ ಶಬ್ದವೇದಿ. ಭಕ್ತಿಪ್ರಧಾನ ಚಿತ್ರಗಳಾದ ಭಕ್ತ ಕುಂಬಾರ, ಸಂತ ತುಕಾರಾಮ, ಭಕ್ತ ಚೇತ, ಐತಿಹಾಸಿಕ ಚಿತ್ರಗಳಾದ ಮಯೂರ, ಶ್ರೀಕೃಷ್ಣದೇವರಾಯ, ರಣಧೀರ ಕಂಠೀರವ, ಪೌರಾಣಿಕ ಚಿತ್ರಗಳಾದ, ಶ್ರೀಕೃಷ್ಣಗಾರುಡಿ, ಬಭ್ರುವಾಹನ ಹಾಗು ಸಾಮಾಜಿಕ ಚಿತ್ರಗಳಾದ ಹಾಲುಜೇನು, ಹೊಸಬೆಳಕು, ದೇವತಾ ಮನುಷ್ಯ, ಜೀವನಚೈತ್ರ, ಆಕಸ್ಮಿಕ ಇತ್ಯಾದಿ ಚಿತ್ರಗಳು ರಾಜ್ ಅಭಿನಯದ ಪ್ರಮುಖ ಚಿತ್ರಗಳು.

ಜೀವನಚೈತ್ರ ಚಿತ್ರದಲ್ಲಿನ ನಾದಮಯ ಈ ಲೋಕವೆಲ್ಲಾ ಹಾಡಿನ ಗಾಯನಕ್ಕೆ ರಾಷ್ಟ್ರಪ್ರಶಸ್ಸ್ತಿಯನ್ನು ಪಡೆದರು. ೧೯೮೧ರಲ್ಲಿ ನಡೆದ ಗೋಕಾಕ್ ಚಳುವಳಿಯ ನೇತೃತ್ವ ವಹಿಸಿದ್ದ ಡಾ.ರಾಜ್, ಕನ್ನಡ ಚಿತ್ರಗಳಷ್ಟೆ ಹೊರತು ಬೇರಾವುದೇ ಭಾಷೆಯ ಚಿತ್ರಗಳಲ್ಲಿ ಅಭಿನಯಿಸಲಿಲ್ಲ.

೨೦೦೦ನೇ ವರ್ಷದಲ್ಲಿ ಕುಖ್ಯಾತ ದಂತಚೋರ ವೀರಪ್ಪನ್‍ನಿಂದ ಅಪಹರಣವಾಗಿದ್ದ ರಾಜ್‍ಕುಮಾರ್ ೧೦೮ ದಿನಗಳ ನಂತರ ಬಿಡುಗಡೆಯಾಗಿದ್ದರು. ೨೦೦೬ ಏಪ್ರಿಲ್ ೧೨ರಂದು ಬೆಂಗಳೂರಿನಲ್ಲಿ, ಹೃದಯಾಘಾತದಿಂದ ಮರಣ ಹೊಂದಿದರು. ರಾಜ್ ಅವರ ಸ್ವ-ಇಚ್ಛೆಯಂತೆ, ಮರಣದ ನಂತರ ಅವರ ಕಣ್ಣುಗಳನ್ನು ದಾನ ಮಾಡಲಾಯಿತು.

ಸಂಚಿಕೆ ೨೧
ಸರ್ದಾರ್ ವಲ್ಲಭಭಾಯ್ ಪಟೇಲ್

ಸರ್ದಾರ್ ವಲ್ಲಭಭಾಯ್ ಪಟೇಲ್ (ಅಕ್ಟೋಬರ್ ೩೧, ೧೮೭೫ - ಡಿಸೆಂಬರ್ ೧೫, ೧೯೫೦) ಭಾರತದ ಪ್ರಮುಖ ಗಣ್ಯರಲ್ಲಿ ಒಬ್ಬರು, ರಾಜಕೀಯ ಮುತ್ಸದ್ಧಿ - ಉಕ್ಕಿನ ಮನುಷ್ಯರೆಂದೇ ಪ್ರಖ್ಯಾತರಾದವರು. ಇವರು ಗಾಂಧೀಜಿಯವರ ಕೆಳಗೆ ಭಾರತದ ರಾಷ್ಟೀಯ ಕಾಂಗ್ರೆಸ್‌ನ ಮುಖ್ಯ ನಿರ್ವಾಹಕರಾಗಿದ್ದರು. ಇವರ ಪ್ರಯತ್ನಗಳಿಂದ ೧೯೩೭ರ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ಜಯವನ್ನು ಸಾಧಿಸಿತು. ಮೂಲತಃ ಸರ್ದಾರ್ ಪಟೇಲ್‌ರವರೇ ಕಾಂಗ್ರೆಸ್ ಸದಸ್ಯರಿಂದ ಪ್ರಧಾನಿ ಹುದ್ದೆಗೆ ಆಯ್ಕೆಯಾಗಿದ್ದರಾದರೂ, ಗಾಂಧೀಜಿಯವರ ಒತ್ತಾಯದ ಮೇಲೆ ಪಟೇಲರು ಹಿಂದಕ್ಕೆ ಸರಿದು ಜವಾಹರ್ ಲಾಲ್ ನೆಹರುರವರಿಗೆ ದಾರಿ ಮಾಡಿಕೊಟ್ಟರು. ಗುಜರಾತಿನ ಜನರಿಂದ ಗೌರವಾರ್ಥ 'ಸರ್ದಾರ್' ಎಂಬ ಬಿರುದು ಪಡೆದರು. ಭಾರತದಲ್ಲಿದ್ದ ಪುಟ್ಟ ಪುಟ್ಟ ರಾಜರಿಂದಾಳಲ್ಪಟ್ಟ ರಾಜ್ಯಗಳನ್ನು ಒಂದುಗೂಡಿಸುವಲ್ಲಿ ಇವರು ವಹಿಸಿದ ಪ್ರಮುಖ ಪಾತ್ರ ಇತಿಹಾಸದ ಪುಟಗಳಲ್ಲಿ ಅಮರವಾಗಿದೆ. ಸರ್ದಾರ್ ಪಟೇಲರಿಗೆ ೧೯೯೧ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಸಂಚಿಕೆ ೨೨

ಅನಿಲ್ ರಾಧಾಕೃಷ್ಣ ಕುಂಬ್ಳೆ (ಜನನ: ಅಕ್ಟೋಬರ್ ೧೭, ೧೯೭೦ ಬೆಂಗಳೂರಿನಲ್ಲಿ) - ಭಾರತದ ಕ್ರಿಕೆಟ್ ಆಟಗಾರ ಮತ್ತು ಭಾರತ ಕ್ರಿಕೆಟ್ ತಂಡದ ಸದಸ್ಯ ೧೯೯೦ರಿಂದ.

ಕುಂಬ್ಳೆ ಲೆಗ್ ಸ್ಪಿನ್ನರ್. ಇವರು ತಮ್ಮದೇ ಆದ ಬೌಲಿಂಗ್ ಶೈಲಿಗೆ ಹೆಸರುವಾಸಿ, ಇವರ ಗೂಗ್ಲಿ ಕ್ರಿಕೆಟ್ ಜಗತ್ತಿನಲ್ಲಿ ಬಹಳ ಪ್ರಸಿದ್ಧ. ಇವರು ಮೊದಲು ಮಧ್ಯ ವೇಗದ ಬೌಲರ್ ಆಗಿ ಕ್ರಿಕೆಟ್ ಪ್ರವೇಶಿಸಿದ್ದು; ಇದು ಅವರಿಗೆ ಕೊಡುಗೆ ಎಂಬಂತೆ ವೇಗವಾಗಿ ಬೌಲ್ ಮಾಡಲು ಸಹಾಯಕವಾಗಿದೆ. ಸಾಧಾರಣವಾಗಿ ಸ್ಪಿನ್ ಬೌಲರ್‌ಗಳು ಬಾಲ್ ಹಾಕುವ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಬೌಲ್ ಮಾಡುವ ಅನಿಲ್ ಕುಂಬ್ಳೆ, ೫೩೦ಕ್ಕೂ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದಾರೆ. ಇವರು ಒಂದು ದಿನದ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದು ಏಪ್ರಿಲ್ ೨೫, ೧೯೯೦ ರಂದು, ಶ್ರೀಲಂಕಾ ಮೇಲಿನ ಪಂದ್ಯದಲ್ಲಿ. ಅದೇ ವರ್ಷ ಟೆಸ್ಟ್ ಕ್ರಿಕೆಟ್‌ಗೆ ಕಾಲಿಟ್ಟರು.

ಪಾಕಿಸ್ತಾನದ ವಿರುದ್ಧ ೧೯೯೯ರಲ್ಲಿ ನಡೆದ ಪಂದ್ಯದಲ್ಲಿನ ಎರಡನೇ ಇನ್ನಿಂಗ್ಸಿನಲ್ಲಿನ ಎಲ್ಲಾ ಹತ್ತು ವಿಕೆಟುಗಳನ್ನು ಪಡೆದು ಅನಿಲ್ ಕುಂಬ್ಳೆ ಒಬ್ಬರಾಗಿ ವಿಶ್ವದಾಖಲೆ ಸ್ಥಾಪಿಸಿದ್ದಾರೆ.

ಸಂಚಿಕೆ ೨೩
ಜಲಿಯನ್‍ವಾಲ ಬಾಗ್ ಹತ್ಯಾಕಾಂಡ

ಜಲಿಯನ್‍ವಾಲಾ ಬಾಗ್ ಹತ್ಯಾಕಾಂಡ (ಅಥವಾ ಅಮೃತಸರ ಹತ್ಯಾಹಾಂಡ) - ಅಮೃತಸರದಲ್ಲಿರುವ ಜಲಿಯನ್‍ವಾಲಾ ಬಾಗ್ ಉದ್ಯಾನದಲ್ಲಿ ಏಪ್ರಿಲ್ ೧೩, ೧೯೧೯ರಂದು ಬ್ರಿಟೀಷ್ ಭಾರತ ಸೇನೆಯಿಂದ ಅಲ್ಲಿ ನೆರೆದಿದ್ದ ಜನರ ಮೇಲೆ ನಡೆಸಿದ ಗುಂಡಿನ ದಾಳಿಯ ಪರಿಣಾಮವಾಗಿ ನಡೆದ ಮಾರಣಹೋಮ.

ಅಂದು ಪಂಜಾಬ್ ರಾಜ್ಯದ ಅಮೃತಸರದಲ್ಲಿನ ಹೃದಯಭಾಗದಲ್ಲಿರುವ ಜಲಿಯನ್‍ವಾಲ ಬಾಗ್ ಉದ್ಯಾನದಲ್ಲಿ ಸಹಸ್ರಾರು ಮಂದಿ ಭಾರತೀಯರು, ಮುಖ್ಯವಾಗಿ ಪಂಜಾಬಿ ನಾಗರೀಕರು, ಸಮಾವೇಶಗೊಂಡಿದ್ದರು.

ಬ್ರಿಗೇಡಿಯರ್ ಜನರಲ್ ರೆಜಿನಾಲ್ಡ್ ಡೈಯರ್, ಉದ್ಯಾನದೊಳಗೆ ಕಾಲಿಡುತ್ತಲೇ, ಅಲ್ಲಿ ನೆರೆದಿದ್ದವರಿಗೆ ಯಾವೊಂದು ಎಚ್ಚರಿಕೆಯನ್ನೂ ಕೊಡದೆ, ಹಠಾತ್ತಾಗಿ ಗುಂಡಿನ ಮಳೆಗರೆವಂತೆ ತಮ್ಮ ತುಕಡಿಗೆ ಆದೇಶವನ್ನಿತ್ತ. ಗುಂಡಿನ ದಾಳಿಯು ಸಂಜೆ ೧೭:೧೫ಕ್ಕೆ ಪ್ರಾರಂಭವಾದದ್ದು ಸುಮಾರು ಹತ್ತರಿಂದ ಹದಿನೈದು ನಿಮಿಷಗಳ ಕಾಲ, ಸತತವಾಗಿ ನಡೆಯಿತು. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ೩೭೯. ಖಾಸಗಿ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚು, ಹಾಗು ಗಾಯಗೊಂಡವರ ಸಂಖ್ಯೆ ೧೨೦೦ಕ್ಕೂ ಹೆಚ್ಚು.

ಮಾರ್ಚ್ ೧೩ ೧೯೪೦ರಂದು ಸಿಖ್ಖರ ಕ್ರಾಂತಿಕಾರಿ ಎಂದು ಹೇಳಲಾಗುವ, ಹತ್ಯಾಕಾಂಡದ ಪ್ರತ್ಯಕ್ಷದರ್ಶಿ ಹಾಗು ಸ್ವತಃ ಗಾಯಗೊಂಡ ಉಧಮ್ ಸಿಂಗ್ ಲಂಡನ್ನಿನ ಕ್ಯಾಕ್‍ಸ್ಟನ್ ಹಾಲ್ ನಲ್ಲಿ ರೆಜಿನಾಲ್ಡ್ ಡೈಯರ್ಅನ್ನು ಹತ್ಯೆಗೈದರು.

ಸಂಚಿಕೆ ೨೪

ಕರಿಮೆಣಸು ಒಂದು ಅಪ್ಪು ಸಸ್ಯ. ಬಳ್ಳಿಯ ಗಂಟುಗಳಲ್ಲಿ ಬೇರು ಮೂಡುತ್ತವೆ. ಬೇರುಗಳು ಒಂದೊ ಆಧಾರ ಸಸ್ಯವನ್ನು ಅಪ್ಪುತ್ತವೆ ಅಥವಾ ಮಣ್ಣಿನಲ್ಲಿ ಇಳಿಯುತ್ತವೆ. ಈ ಬೇರುಗಳು ಮಣ್ಣು ಅಥವಾ ಮರದಕಾಂಡದಿಂದ ಪೋಷಕಾಂಶಗಳನ್ನು ಪಡೆಯುತ್ತವೆ. ಹೂವುಗಳು ಸೂಕ್ಷ್ಮವಾಗಿದ್ದು ಗೆರೆಗಳ ಮೇಲೆ ಮೂಡುತ್ತವೆ. ಗೆರೆಗಳು ಎಳತಾದ ಎಲೆಯ ಸಂದಿಯಲ್ಲಿ ಹುಟ್ಟುತ್ತವೆ. ಎಳೆ ಗೆರೆಗಳು ೪ ರಿಂದ ೮ ಸೆಂ.ಮೀ ಉದ್ದವಾಗಿದ್ದು ಪೂರ್ಣ ಬೆಳೆದ ಗೆರೆಯು ೭ ರಿಂದ ೧೫ ಸೆಂ.ಮೀ ಉದ್ದವಾಗಿರುತ್ತವೆ. ಬಳ್ಳಿಯು ಫಲವತ್ತಾದ ಹಾಗು ಪಸೆ ಇರುವ ಮಣ್ಣಿನಲ್ಲಿ ಬೆಳೆಯುತ್ತದೆ. ಸ್ವಾಭಾವಿಕವಾಗಿ ಹಣ್ಣಿನಿಂದ ಹಾಗು ಕಾಂಡದಿಂದ ಬರುವ ಬಳ್ಳಿಯಿಂದ ಸಂತಾನಭಿವೃದ್ಧಿಯಾಗುತ್ತದೆ. ಕೃಷಿ ಮಾಡುವವರು ಬಳ್ಳಿಯನ್ನು ೧ ಮೀ ಉದ್ದಕ್ಕೆ ಕತ್ತರಿಸಿ ನಾಟಿ ಮಾಡುತ್ತಾರೆ. ಗಟ್ಟಿ ಕಾಂಡದ ಸಸ್ಯಗಳ ಮೇಲೆ ಇವು ಬೇಗ ಬೆಳೆಯುತ್ತವೆ. ಉತ್ತಮ ಗಾಳಿ ಬೆಳಕು ಬಳ್ಳಿಗೆ ಅವಶ್ಯ, ಹಾಗೇಯೆ ಸ್ವಲ್ಪ ನೆರಳು ಕೂಡ ಅವಶ್ಯ. ಬಳ್ಳಿಯು ೪ರಿಂದ ೫ ವರ್ಷಗಳಲ್ಲಿ ಫಲ ನೀಡಲು ಪ್ರಾರಂಭಿಸುತ್ತದೆ. ಗೆರೆಯಲ್ಲಿ ಒಂದೆರಡು ಕಾಳುಗಳು ಹಣ್ಣಾದಾಗ ಕೊಯ್ಲು ಪ್ರಾರಂಭಿಸಬಹುದು. ಕಾಳು ಹಣ್ಣಾದಾಗ ಕೆಂಪು ಬಣ್ಣಕ್ಕೆ ತಿರುಗುತ್ತದೆ. ಕೊಯ್ಲು ಮಾಡಿದ ಗೆರೆಗಳಿಂದ ಕಾಳನ್ನು ಬೇರ್ಪಡಿಸಿ ಬಿಸಿಲಿನಲ್ಲಿ ಒಣಗಿಸಬೇಕು. ಮೂರು ನಾಲ್ಕು ಬಿಸಿಲಿನ ನಂತರ ಕಾಳುಗಳು ಕಪ್ಪು ಬಣ್ಣಕ್ಕೆ ತಿರುಗುತ್ತವೆ. ಕರಿಮೆಣಸಿಗೆ ಆಂಗ್ಲ ಭಾಷೆಯ ಪದ ಪೆಪ್ಪರ್ ಎಂಬುದು ಸಂಸ್ಕೃತದ ಪದ ಪಿಪ್ಪಲಿ ಎಂಬ ಪದದ ಗ್ರೀಕ್ (ತನ್ಮೂಲಕ ಲ್ಯಾಟಿನ್) ಬಳಕೆಯಿಂದ ಬಂದಿದೆ ಎಂದು ನಂಬಲಾಗಿದೆ.

ಮೆಣಸು ಕಾಳುಗಳನ್ನು ಅದರ ಮೂಲವನ್ನವಲಂಬಿಸಿ ವರ್ಗೀಕರಿಸಲಾಗುತ್ತದೆ. ಎರಡು ಬಹಳ ಜನಪ್ರಿಯ ತಳಿಗಳು ಭಾರತದ ಮಲಬಾರ್ ತೀರದಲ್ಲಿ ದೊರೆಯುವ ತಳಿಗಳು: ಮಲಬಾರ್ ಮೆಣಸು ಹಾಗೂ ತೆಲ್ಲಿಚೆರಿ ಮೆಣಸು. ತೆಲ್ಲಿಚೆರಿ ತಳಿ ದೊಡ್ಡ ಗಾತ್ರದ ಹೆಚ್ಚು ಹಣ್ಣಾದ ಒಳ್ಳೆಯ ಜಾತಿಯ ತಳಿಯೆಂದು ಹೇಳಲಾಗುತ್ತದೆ. ಸರವಾಕ ಎಂಬ ತಳಿಯ ಮೆಣಸು ಮಲೇಶಿಯದ ಬೋರ್ನಿಯೋ ಪ್ರಾಂತ್ಯದಲ್ಲಿ, ಹಾಗೂ ಲ್ಯಾಂಪೋಂಗ್ ಎಂಬ ತಳಿ ಇಂಡೋನೇಶಿಯದ ಸುಮಾತ್ರ ದ್ವೀಪದಲ್ಲಿ ದೊರಕುತ್ತವೆ. ಬಿಳಿಯ ಮುಂಟೋಕ್ ಮೆಣಸು ಇಂಡೋನೇಶಿಯದ ಮತ್ತೊಂದು ಉತ್ಪಾದನೆ, ಬಾಂಗ್ಕಾ ದ್ವೀಪದಲ್ಲಿ ದೊರೆಯುವಂತದ್ದು.

ಸಂಚಿಕೆ ೨೫
ಸತ್ಯಾಗ್ರಹದ ನಡಿಗೆಯಲ್ಲಿ ಗಾಂಧೀಜಿ ಮತ್ತು ಇತರರು
Enlarge
ಸತ್ಯಾಗ್ರಹದ ನಡಿಗೆಯಲ್ಲಿ ಗಾಂಧೀಜಿ ಮತ್ತು ಇತರರು

ಉಪ್ಪಿನ ಸತ್ಯಾಗ್ರಹ ಭಾರತ ಇತಿಹಾಸದ ಒಂದು ಪ್ರಮುಖ ಘಟನೆಯಾಗಿದೆ. ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು, ಉಪ್ಪಿನ ಸತ್ಯಾಗ್ರಹ ಅಥವ ದಂಡಿ ಯಾತ್ರೆ ಎಂದು. ಕರೆಯಲಾಗುತ್ತದೆ.

ಬ್ರಿಟೀಷ್ ಸರ್ಕಾರವು ಸಾಮಾನ್ಯ ಜನರು ಬಳಸುವ ಉಪ್ಪಿನ ಮೇಲೆ ಕರವನ್ನು ವಿಧಿಸಿ ಸರ್ಕಾರದ ಬೊಕ್ಕಸವನ್ನು ತುಂಬಿಸಿ ಕೊಳ್ಳುತ್ತಿತ್ತು. ಈ ಕರದಡಿಯಲ್ಲಿ ಬ್ರಿಟಿಷ್ ಸರ್ಕಾರದ ಹೊರತು ಯಾರೂ ಉಪ್ಪನ್ನು ತಯಾರಿಸುವಂತಿರಲಿಲ್ಲ ಅಥವ ಮಾರುವಂತಿರಲಿಲ್ಲ. ಸಮುದ್ರ ತಟದಲ್ಲಿದ್ದ ನಾಗರೀಕರಿಗೆ ಸಮುದ್ರದ ಉಪ್ಪು ಪುಕ್ಕಟೆಯಲ್ಲಿ ಸುಲಭವಾಗಿ ದೊರೆಯುವಂತಿದ್ದರೂ ಅವರು ಅದನ್ನು ಸರ್ಕಾರದಿಂದ ಕೊಂಡುಕೊಳ್ಳಬೇಕಾಗಿತ್ತು.ಈ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮ ಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ಸಮುದ್ರ ತಟದಲ್ಲಿರುವ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು. ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ, ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಯಾತ್ರೆಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.

ಭಾರತದಾದ್ಯಂತ ಉಪ್ಪಿನ ಸತ್ಯಾಗ್ರಹವು ಸಹಸ್ರಾರು ಜನರನ್ನು ತನ್ನೆಡೆಗೆ ಸೆಳೆಯಿತು ಹಾಗು ತನ್ಮೂಲಕ ವಿಶ್ವದ ಗಮನವನ್ನು ಭಾರತದಲ್ಲಿ ನಡೆಯುತ್ತಿದ್ದ ಸತ್ಯಾಗ್ರಹ ಚಳುವಳಿಯತ್ತ ಸೆಳೆಯುವುದರಲ್ಲಿ ಯಶಸ್ವಿಯಾಯಿತು. ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ದಾಂಡಿ ಸತ್ಯಾಗ್ರಹವು ಒಂದು ಮಹತ್ವಪೂರ್ಣ ಘಟನೆಯಾಗಿತ್ತು.

ಸಂಚಿಕೆ ೨೬
ರಾಮಾಯಣದ ಒಂದು ದೃಶ್ಯ
Enlarge
ರಾಮಾಯಣದ ಒಂದು ದೃಶ್ಯ

ರಾಮಾಯಣ ಹಿಂದೂ ಧರ್ಮಪವಿತ್ರಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹತ್ಕಾವ್ಯವು ವಾಲ್ಮೀಕಿ ಎಂಬ ಋಷಿಯಿಂದ ರಚಿಸಲ್ಪಟ್ಟಿದೆ. "ರಾಮಾಯಣ" ಪದವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಆಯಣ=ರಾಮಾಯಣ) "ರಾಮನ ಕಥೆ" ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದ ರಚಿತವಾಗಿದ್ದು, ೭ ಕಾಂಡಗಳಾಗಿ ವಿಭಜಿತವಾಗಿದೆ. ರಾಮಾಯಣದ ಕಥೆಯು ಮುಖ್ಯವಾಗಿ ಅಯೋಧ್ಯೆಯ ರಾಜಪುತ್ರ ರಾಮ, ಆತನ ಮಡದಿ ಸೀತೆ ಹಾಗೂ ಸೀತೆಯ ಅಪಹರಣ ಮಾಡಿದ ರಾವಣನ ಸಂಹಾರವನ್ನು ಕುರಿತಾಗಿದೆ.

ಇತ್ತೀಚಿನ ಸಂಶೋಧನೆಗಳಂತೆ ರಾಮಾಯಣದ ರಚನಾ ಕಾಲ ಕ್ರಿ.ಪೂ. ೫ನೇ ಶತಮಾನದಿಂದ ಕ್ರಿ.ಪೂ. ೧ನೇ ಶತಮಾನವೆಂದು ನಿರ್ಧರಿಸಲಾಗಿದೆ. ಈ ಕಾಲವು ಮಹಾಭಾರತದ ಮೊದಲ ಆವೃತ್ತಿಗಳಿಗೆ ಹತ್ತಿರವಾದ ಕಾಲ ಎಂದು ಹೇಳಲಾಗುತ್ತದೆ. ಪ್ರಾಚೀನ ಭಾರತದ ಪ್ರಮುಖ ಸಾಹಿತ್ಯ ಕೃತಿಗಳಲ್ಲಿ ಒಂದಾದ ರಾಮಾಯಣವು, ಭಾರತ ಉಪಖಂಡದ ಕಲೆ ಮತ್ತು ಸಂಸ್ಕೃತಿಯ ಮೇಲೆ ಆಳವಾದ ಪ್ರಭಾವ ಬೀರಿದೆ. ರಾಮನ ಕಥೆಯು ಅನೇಕ ಭಾಷೆಗಳಲ್ಲಿ ನಂತರದ ಬಹಳಷ್ಟು ಸಾಹಿತ್ಯಕ್ಕೆ ಸ್ಪೂರ್ತಿಯಾಯಿತು. ೧೬ನೇ ಶತಮಾನದ ಹಿಂದಿ ಕವಿ ತುಳಸೀದಾಸರು, ೧೩ನೇ ಶತಮಾನದ ತಮಿಳು ಕವಿ ಕಂಬ, ೨೦ನೇ ಶತಮಾನದ ಕನ್ನಡದ ರಾಷ್ಟ್ರಕವಿ ಕುವೆಂಪು (ಶ್ರೀ ರಾಮಾಯಣದರ್ಶನಂ) ಪ್ರಭಾವಗೊಂಡವರಲ್ಲಿ ಪ್ರಮುಖರು.

ರಾಮಾಯಣ ಕೇವಲ ಹಿಂದೂ ಧಾರ್ಮಿಕ ಕೃತಿಯಾಗಿ ಉಳಿದಿಲ್ಲ. ೮ನೇ ಶತಮಾನದಿಂದ ಅನೇಕ ಭಾರತೀಯ ವಸಾಹತುಗಳು ಆಗ್ನೇಯ ಏಷ್ಯಾದಲ್ಲಿ ಏರ್ಪಟ್ಟಾದಾಗ ರಾಮಾಯಣದ ಕಥೆ ವಿವಿಧ ರೂಪಾಂತರಗಳ ಮೂಲಕ ಆ ದೇಶಗಳಿಗೂ ಹರಡಿತು. ಇವುಗಳ ಮೂಲಕ ರಾಮಾಯಣ ಇಂದಿನ ಇಂಡೊನೇಷ್ಯಾ, ಥೈಲೆಂಡ್, ಕಾಂಬೋಡಿಯ, ಮಲೇಷಿಯ, ವಿಯೆಟ್ನಾಮ್ ಮತ್ತು ಲಾಓಸ್ ಗಳಲ್ಲಿ ಸಾಹಿತ್ಯ, ಶಿಲ್ಪಕಲೆ ಮತ್ತು ನಾಟಕ ಮಾಧ್ಯಮಗಳಲ್ಲಿ ವ್ಯಕ್ತವಾಗಿದೆ.

Our "Network":

Project Gutenberg
https://gutenberg.classicistranieri.com

Encyclopaedia Britannica 1911
https://encyclopaediabritannica.classicistranieri.com

Librivox Audiobooks
https://librivox.classicistranieri.com

Linux Distributions
https://old.classicistranieri.com

Magnatune (MP3 Music)
https://magnatune.classicistranieri.com

Static Wikipedia (June 2008)
https://wikipedia.classicistranieri.com

Static Wikipedia (March 2008)
https://wikipedia2007.classicistranieri.com/mar2008/

Static Wikipedia (2007)
https://wikipedia2007.classicistranieri.com

Static Wikipedia (2006)
https://wikipedia2006.classicistranieri.com

Liber Liber
https://liberliber.classicistranieri.com

ZIM Files for Kiwix
https://zim.classicistranieri.com


Other Websites:

Bach - Goldberg Variations
https://www.goldbergvariations.org

Lazarillo de Tormes
https://www.lazarillodetormes.org

Madame Bovary
https://www.madamebovary.org

Il Fu Mattia Pascal
https://www.mattiapascal.it

The Voice in the Desert
https://www.thevoiceinthedesert.org

Confessione d'un amore fascista
https://www.amorefascista.it

Malinverno
https://www.malinverno.org

Debito formativo
https://www.debitoformativo.it

Adina Spire
https://www.adinaspire.com