Ebooks, Audobooks and Classical Music from Liber Liber
a b c d e f g h i j k l m n o p q r s t u v w x y z





Web - Amazon

We provide Linux to the World


We support WINRAR [What is this] - [Download .exe file(s) for Windows]

CLASSICISTRANIERI HOME PAGE - YOUTUBE CHANNEL
SITEMAP
Audiobooks by Valerio Di Stefano: Single Download - Complete Download [TAR] [WIM] [ZIP] [RAR] - Alphabetical Download  [TAR] [WIM] [ZIP] [RAR] - Download Instructions

Make a donation: IBAN: IT36M0708677020000000008016 - BIC/SWIFT:  ICRAITRRU60 - VALERIO DI STEFANO or
Privacy Policy Cookie Policy Terms and Conditions
ವೀರೇಂದ್ರ ಹೆಗ್ಗಡೆ - Wikipedia

ವೀರೇಂದ್ರ ಹೆಗ್ಗಡೆ

From Wikipedia

ವೀರೇಂದ್ರ ಹೆಗ್ಗಡೆ
Enlarge
ವೀರೇಂದ್ರ ಹೆಗ್ಗಡೆ

ಡಾ. ವೀರೇಂದ್ರ ಹೆಗ್ಗಡೆ ಪ್ರಸಿದ್ಧ ಧರ್ಮಸ್ಥಳ ಕ್ಷೇತ್ರದಲ್ಲಿರುವ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಗಳು. ತಮ್ಮ ಸಮಾಜಸೇವೆಗೆ ಇವರು ಪ್ರಸಿದ್ಧರಾಗಿದ್ದಾರೆ.

ಪರಿವಿಡಿ

[ಬದಲಾಯಿಸಿ] ಧರ್ಮಸ್ಥಳ

ವೀರೇಂದ್ರ ಹೆಗ್ಗಡೆಯವರು ನವೆಂಬರ್ ೨೫, ೧೯೪೮ ರಂದು ಜನಿಸಿದರು. ಅವರು ೨೦ ವರ್ಷದವರಿರುವಾಗಲೆ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಯಾದರು. ಸ್ವತಃ ಜೈನರಾಗಿ ಹಿಂದೂ ದೇವಸ್ಥಾನದ ಧರ್ಮದರ್ಶಿಯಾಗಿ ಕಾರ್ಯ ವಹಿಸುವ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಕ್ಷೇತ್ರಕ್ಕೆ ಧಾರ್ಮಿಕ ಸಹಿಷ್ಣುತೆಯ ಕ್ಷೇತ್ರ ಎಂದು ಹೆಸರು ಬರುವಂತೆ ಮಾಡಿದ್ದಾರೆ. ಧರ್ಮಸ್ಥಳದ ಬೃಹತ್ ಬಾಹುಬಲಿಯ ವಿಗ್ರಹವನ್ನು ಕೆತ್ತಿಸಿ ಸ್ಥಾಪಿಸಿದವರು ಇವರೇ. ಧರ್ಮಸ್ಥಳದಲ್ಲಿ ಪ್ರತಿ ದಿನ ಆಗಮಿಸುವವರೆಲ್ಲರಿಗೂ ಉಚಿತ ಊಟದ ವ್ಯವಸ್ಥೆಯುಂಟು. ಪ್ರತಿ ದಿನವೂ ಸುಮಾರು ೩೦೦೦ ಜನರ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ.

[ಬದಲಾಯಿಸಿ] ಪರಿಹಾರ ಕಾರ್ಯಕ್ರಮಗಳು

ನಂತರ ಧರ್ಮಸ್ಥಳ ಮತ್ತು ಇತರ ವಿವಿಧೆಡೆಗಳಲ್ಲಿ ಸಮಾಜ ಸೇವೆ, ಆರೋಗ್ಯ ವಿಕಾಸ, ಶಿಕ್ಷಣ ಮುಂತಾದ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಕ್ಷಾಮ ಬಂದಾಗ ಅಗತ್ಯವಿದ್ದವರಿಗೆ ಪರಿಹಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೧೯೭೪ ರ ಪ್ರವಾಹ ಮತ್ತು ಗದಗ್ ನಲ್ಲಿ ೧೯೯೨ ರಲ್ಲಿ ಪ್ರವಾಹ ಉಂಟಾದಾಗಲೂ ಪುನರ್ನಿರ್ಮಾಣ ಕಾರ್ಯ ಮತ್ತು ಪರಿಹಾರಗಳಿಗಾಗಿ ಸಹಾಯ ಮಾಡಿದರು. ಮಂಗಳೂರಿನಲ್ಲಿ ಇತ್ತೀಚಿನ ಪ್ರವಾಹದ ಸಮಯದಲ್ಲೂ ಸುಮಾರು ೨ ಲಕ್ಷ ಇಟ್ಟಿಗೆಗಳನ್ನು ಪುನರ್ನಿರ್ಮಾಣಕ್ಕಾಗಿ ಒದಗಿಸಿಕೊಟ್ಟರು.

[ಬದಲಾಯಿಸಿ] ಗ್ರಾಮೀಣಾಭಿವೃದ್ಧಿ

ವೀರೇಂದ್ರ ಹೆಗ್ಗಡೆಯವರು ಹಲವಾರು ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ೧೯೮೨ ರಲ್ಲಿ ಆರಂಭಿಸಲ್ಪಟ್ಟ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬೆಳ್ತಂಗಡಿಯ ೮೧ ಗ್ರಾಮಗಳಲ್ಲಿ ೧೮,೦೦೦ ಮನೆತನಗಳಿಗೆ ಸಹಾಯವನ್ನೊದಗಿಸುತ್ತಿದೆ. ೧೯೭೨ ರಿಂದ ಆರಂಭಗೊಂಡು ಧರ್ಮಸ್ಥಳದಲ್ಲಿ "ಸಾಮೂಹಿಕ ವಿವಾಹ"ಗಳನ್ನು ಆರಂಭಿಸಿದರು. ಈಗ ವಾರ್ಷಿಕವಾಗಿ ೫೦೦ಕ್ಕೂ ಹೆಚ್ಚು ದಂಪತಿಗಳು ಧರ್ಮಸ್ಥಳದಲ್ಲಿ ವಿವಾಹವಾಗುತ್ತಾರೆ. ಪ್ರತಿಯೊಬ್ಬರಿಗೂ ಅವರವರ ಧಾರ್ಮಿಕ ವಿಧಿಯನುಸಾರ ವಿವಾಹ ನಡೆಸಲಾಗುತ್ತದೆ.

[ಬದಲಾಯಿಸಿ] ಆರೋಗ್ಯ

ಆರೋಗ್ಯ ವಿಕಾಸಕ್ಕಾಗಿ ವೀರೇಂದ್ರ ಹೆಗ್ಗಡೆಯವರು ಬಹಳಷ್ಟು ದುಡಿದಿದ್ದಾರೆ. ಸಂಚಾರಿ ಆಸ್ಪತ್ರೆಗಳು, ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಸಂಸ್ಥೆಯವರು ನಡೆಸುವ ಕ್ಷಯರೋಗ ಚಿಕಿತ್ಸಾಲಯ (ಮಂಗಳೂರು), ಉಡುಪಿ ಮತ್ತು ಹಾಸನಗಳಲ್ಲಿ ಆಯುರ್ವೇದ ಆಸ್ಪತ್ರೆ, ಮಂಗಳೂರಿನ ಎಸ್ ಡಿ ಎಮ್ ಕಣ್ಣಿನ ಆಸ್ಪತ್ರೆ ಮತ್ತು ದಂತ ಚಿಕಿತ್ಸಾಲಯ, ಯೋಗ ತರಬೇತಿ ಶಿಬಿರಗಳು ಮೊದಲಾಗಿ ಅನೇಕ ಸಂಸ್ಥೆ-ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದಾರೆ.

[ಬದಲಾಯಿಸಿ] ಶಿಕ್ಷಣ

ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ ಶ್ರೀ ಮಂಜುನಾಥೇಶ್ವರ ಸಾಂಸ್ಕೃತಿಕ ಸಂಶೋಧನಾ ಕೇಂದ್ರ ಧರ್ಮ, ಸಾಹಿತ್ಯ ಮತ್ತು ಕಲೆಯ ವಿಷಯಗಳ ಬಗ್ಗೆ ಸಂಶೋಧನೆಯನ್ನು ನಡೆಸುತ್ತಾ ಬಂದಿದೆ. ಅನೇಕ ಸಮಕಾಲೀನ ಮತ್ತು ಪ್ರಾಯೋಗಿಕ ಶೈಕ್ಷಣಿಕ ಸಂಸ್ಥೆ - ಕಾರ್ಯಕ್ರಮಗಳನ್ನೂ ಹೆಗ್ಗಡೆಯವರು ನಡೆಸುತ್ತಿದ್ದಾರೆ. ಉಚಿತ ವಿದ್ಯಾರ್ಥಿ ನಿಲಯಗಳು, ಹಲವಾರು ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಕಾಲೇಜುಗಳನ್ನು ಸ್ಥಾಪಿಸಿದ್ದಾರೆ.

[ಬದಲಾಯಿಸಿ] ಸಂಸ್ಕೃತಿ

ಕರ್ನಾಟಕದ ವಿಶಿಷ್ಟ ನೃತ್ಯ ಪದ್ಧತಿಯಾದ ಯಕ್ಷಗಾನದ ಬೆಳವಣಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಹಾಗೆಯೇ ಇತರ ಕುಶಲ ಕಲೆಗಾರಿಕೆಗಳಿಗೆ ಸಂಬಂಧಪಟ್ಟಂತೆ ಕಾರ್ಯಕ್ರಮಗಳನ್ನು ನಡೆಸಿದ್ದಾರೆ.

[ಬದಲಾಯಿಸಿ] ಗೌರವಗಳು

ವೀರೇಂದ್ರ ಹೆಗ್ಗಡೆಯವರ ಕಾರ್ಯವನ್ನು ಗುರುತಿಸಿ ಸರ್ಕಾರ ಮತ್ತು ಅನೇಕ ಸಂಸ್ಥೆಗಳು ಅವರಿಗೆ ಪ್ರಶಸ್ತಿ-ಗೌರವಗಳನ್ನು ಇತ್ತಿವೆ. ೧೯೮೫ ರಲ್ಲಿ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಮತ್ತು ೧೯೯೩ ರಲ್ಲಿ ಅಂದಿನ ರಾಷ್ಟ್ರಪತಿ ಶಂಕರ್ ದಯಾಳ್ ಶರ್ಮಾ ರವರಿಂದ "ರಾಜರ್ಷಿ" ಗೌರವ ಇವರಿಗೆ ಸಂದಿವೆ. ಅನೇಕ ಧಾರ್ಮಿಕ ಮಠಗಳು ಇವರಿಗೆ "ಧರ್ಮರತ್ನ", "ಧರ್ಮಭೂಷಣ". "ಅಭಿನವ ಚಾವುಂಡರಾಯ", "ಪರೋಪಕಾರ ಧುರಂಧರ" ಮೊದಲಾದ ಬಿರುದುಗಳು ಇವರಿಗೆ ಸಂದಿವೆ. ೧೯೯೪ ರಲ್ಲಿ ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶತಿ ದೊರಕಿತು. ಮಂಗಳೂರು ವಿಶ್ವವಿದ್ಯಾಲಯ ಇವರಿಗೆ ಗೌರವ ಡಾಕ್ಟರೇಟ್ ಅನ್ನು ನೀಡಿದೆ. ಇತ್ತೀಚೆಗೆ ೨೦೦೪ ರ "ವರ್ಷದ ಕನ್ನಡಿಗ" ಗೌರವ ವೀರೇಂದ್ರ ಹೆಗ್ಗಡೆಯವರಿಗೆ ಲಭಿಸಿದೆ.

Our "Network":

Project Gutenberg
https://gutenberg.classicistranieri.com

Encyclopaedia Britannica 1911
https://encyclopaediabritannica.classicistranieri.com

Librivox Audiobooks
https://librivox.classicistranieri.com

Linux Distributions
https://old.classicistranieri.com

Magnatune (MP3 Music)
https://magnatune.classicistranieri.com

Static Wikipedia (June 2008)
https://wikipedia.classicistranieri.com

Static Wikipedia (March 2008)
https://wikipedia2007.classicistranieri.com/mar2008/

Static Wikipedia (2007)
https://wikipedia2007.classicistranieri.com

Static Wikipedia (2006)
https://wikipedia2006.classicistranieri.com

Liber Liber
https://liberliber.classicistranieri.com

ZIM Files for Kiwix
https://zim.classicistranieri.com


Other Websites:

Bach - Goldberg Variations
https://www.goldbergvariations.org

Lazarillo de Tormes
https://www.lazarillodetormes.org

Madame Bovary
https://www.madamebovary.org

Il Fu Mattia Pascal
https://www.mattiapascal.it

The Voice in the Desert
https://www.thevoiceinthedesert.org

Confessione d'un amore fascista
https://www.amorefascista.it

Malinverno
https://www.malinverno.org

Debito formativo
https://www.debitoformativo.it

Adina Spire
https://www.adinaspire.com